Mysore
23
broken clouds

Social Media

ಗುರುವಾರ, 15 ಜನವರಿ 2026
Light
Dark

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು.

ಮದ್ದೂರಿನಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಹಾಗೂ ಮಂಡ್ಯದ ವಿಸಿ ಫಾರಂ ಗೇಟ್‌ ಬಳಿ ಮಾಜಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ಮಂಗಳವಾದ್ಯ, ಜಾನಪದ ಕಲಾತಂಡಗಳೊಂದಿಗೆ ಎಚ್‌ಡಿಕೆಯನ್ನು ಸ್ವಾಗತಿಸಲಾಯಿತು.

ಬಳಿಕ ಪಕ್ಷದ ಮುಖಂಡರು, ಬೆಂಬಲಿಗರು, ಕಾರ್ಯಕರ್ತರೊಂದಿಗೆ ಎಚ್‌ಡಿಕೆ ಕೇಕ್‌ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಗುತ್ತಿಗೆದಾರ ಶಂಕರೇಗೌಡ ಅವರು ಸಚಿವರಿಗೆ ದುಬಾರಿ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದರು.

ಈ ವೇಳೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ಮಂಡ್ಯದಲ್ಲಿ ಕಾರ್ಯಕರ್ತರು ನನ್ನ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಕ್ಕೆ ನಾನು ಅವರಿಗೆ ಚಿರಋಣಿ ಎಂದು ಹೇಳಿದರು.

Tags:
error: Content is protected !!