heavy rain shrirangapattana
ಶ್ರೀರಂಗಪಟ್ಟಣ: ಮಂಗಳವಾರ ರಾತ್ರಿ ತಾಲೂಕಿನಾದ್ಯಂತ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಬಾಳೆ ತೋಟ ಸಂಪೂರ್ಣವಾಗಿ ಧರೆಗುಳಿರುವ ಘಟನೆ ನಡೆದಿದೆ.
ತಾಲೂಕಿನ ಕಾರೇಕುರ ಗೇಟ್ ಹಾಗೂ ಪಂಪ್‌ಹೌಸ್ ಬಳಿ ಪ್ರತ್ಯೇಕವಾಗಿ ಎರಡು ಬೃಹತ್ ಗಾತ್ರದ ನೀಲಗಿರಿ ಮರಗಳು ಮಂಗಳವಾರ ರಾತ್ರಿ 9 ಗಂಟೆ ಸಮಯದಲ್ಲಿ ನೆಲಕ್ಕುರುಳಿದ್ದು, ಇದರಿಂದ ಪಶ್ಚಿಮವಾಹಿನಿ- ಕೆಆರ್‌ಎಸ್ ರಸ್ತೆ ಸಂಪೂರ್ಣವಾಗಿ ಅಸ್ಥವೆಸ್ತಗೊಂಡಿತ್ತು. ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಹೆದ್ದಾರಿಯಲ್ಲಿ ಬಿದಿದ್ದ ಮರಗಳನ್ನು ತೆರವುಗಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಬಾಳೆ ತೋಟ ನಾಶ
ತಾಲೂಕಿನ ಅರಕೆರೆ ಗ್ರಾಮದ ಕೆ.ರಾಜು ಎಂಬುವವರಿಗೆ ಸೇರಿದ್ದ ಸುಮಾರು 2.3 ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟೆ ಬಿರುಗಾಳಿಯಿಂದಾಗಿ ಸಂಪೂರ್ಣವಾಗಿ ನೆಲಕಚ್ಚಿದೆ. ಇದರಿಂದ ಫಸಲು ಕೈಗೆ ಸಿಗುವ ವೇಳೆ ಇಂತಹ ಘಟನೆ ಸಂಬಭವಿಸಿದ್ದು ರೈತ ಕಂಗಾಲಾಗಿದ್ದಾರೆ.
ಹಾರಿದ ಕಲ್ನಾರ್ ಶೀಟ್
ತಾಲೂಕಿನ ಮಹದೇವಪುರ ಗ್ರಾಮದ ಪುಟ್ಟಸ್ವಾಮಿ ಎಂಬುವವರ ಮನೆ ಮೇಲಿನ ಸೀಟ್‌ಗಳು ಸಂಪೂರ್ಣವಾಗಿ ಹಾರಿ ಹೋಗಿದ್ದು, ಪುಟ್ಟಸ್ವಾಮಿ ಕಂಗಾಲಾಗಿದ್ದಾರೆ.
ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿ, ತಾಲೂಕಿನಾದ್ಯಂತ ಬಾರಿ ಮಳೆಯಿಂದಾಗಿ ರೈತರ ಬೆಳೆಗಳು ಸೇರಿದಂತೆ ಅನೇಕ ಮನೆಗಳು ಅನಾಹುತ ಸಂಬವಿಸಿರುವುದು ಕಂಡುಬಂದಿದೆ. ಹಾನಿಯಾಗಿರುವ ಬಗ್ಗೆ ಸೂಕ್ತ ಮಾಹಿತಿಯೊಂದಿಗೆ ಅರ್ಜಿ ನೀಡುವಂತೆ ತಿಳಿಸಲಾಗಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸೂಕ್ತ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದಿದ್ದಾರೆ
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…