ಮಂಡ್ಯ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದೆ.
ಈ ಬೆನ್ನಲ್ಲೇ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿದ್ದು, ಅನ್ನದಾತರು ಈ ಬಾರಿ ಉತ್ತಮ ಬೆಳೆ ಬೆಳೆಯಬಹುದು ಎಂದು ಅಂದಾಜಿಸಿದ್ದಾರೆ.
ಕೆಆರ್‌ಎಸ್ ಜಲಾಶಯದ ಒಳಹರಿವು 51,375 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು ಕಾಲುವೆ ಹಾಗೂ ನದಿ ಸೇರಿದಂತೆ 10,000 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ.
124 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯದ ಭರ್ತಿಗೆ ಇನ್ನು ಕೇವಲ 5 ಅಡಿ ಬಾಕಿಯಿದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗುತ್ತದೆ.
ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟರಂತೂ ಕಾವೇರಿ ನದಿ ತನ್ನ ರೌದ್ರಾವತಾರ ತಾಳಲಿದ್ದು, ನದಿ ಪಾತ್ರದ ತಗ್ಗು ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಲಿವೆ.
ಈ ಹಿನ್ನೆಲೆಯಲ್ಲಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಜಾನುವಾರುಗಳನ್ನು ಸಹ ಸುರಕ್ಷಿತ ಸ್ಥಳಕ್ಕೆ ರವಾನಿಸಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…