Mysore
20
overcast clouds
Light
Dark

ಸಂಪೂರ್ಣ ಭರ್ತಿಯಾದ ಕೆಆರ್‌ಎಸ್‌ ಜಲಾಶಯ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ರೈತರಿಗೆ ತೀವ್ರ ಸಂತೋಷವಾಗಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಜಲಾಶದಲ್ಲಿಂದು 124.80 ಅಡಿ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ.

ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯ ಬಹುಬೇಗ ಭರ್ತಿಯಾಗಿದ್ದು, ರೈತರು ಈ ಬಾರಿ ನಾಲೆಗಳ ಮೂಲಕ ನೀರನ್ನು ಬಳಸಿ ಉತ್ತಮ ಫಸಲು ಬೆಳೆಯಲು ಅಂದಾಜು ಮಾಡಿದ್ದಾರೆ.

ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿರುವುದರಿಂದ ನಾಲೆಗಳು ಹಾಗೂ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದ್ದು, ಕಾವೇರಿ ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನೂ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಪ್ರವಾಹ ಪರಿಸ್ಥಿತಿ ಜಾಸ್ತಿಯಾದರೆ, ತಮ್ಮ ತಮ್ಮ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಕೆಆರ್‌ಎಸ್‌ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡಲಾಗುವುದರಿಂದ ಕಾವೇರಿ ನದಿ ಬಳಿ ಯಾರೂ ಕೂಡ ತೆರಳದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.