ಮಂಡ್ಯ

ಕೆಆರ್‌ಎಸ್‌ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್‌ ಹೊರಹರಿವು: ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಭಾರೀ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 124 ಅಡಿಗಳಾಗಿದೆ. ಜಲಾಶಯದ ಇಂದಿನ ಒಳಹರಿವು 1.20 ಲಕ್ಷ ಕ್ಯೂಸೆಕ್ಸ್‌ಗಳಿದ್ದು, ಜಲಾಶಯದ ಇಂದಿನ ಹೊರಹರಿವನ್ನು 1.30 ಲಕ್ಷ ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ.

ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾವೇರಿ ನದಿಗೆ ನೀರನ್ನು ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರಿಗೆ ಪ್ರವಾಹ ಭೀತಿ ಎದುರಾಗಿದ್ದು, ನದಿಯ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.

ಜಲಾಶಯಕ್ಕೆ ಒಳಹರಿವು ಹೆಚ್ಚಾದರೆ ಹೊರಹರಿವನ್ನು ಇನ್ನೂ ಕೂಡ ಹೆಚ್ಚಳ ಮಾಡಲಾಗುತ್ತದೆ. ಆದ್ದರಿಂದ ಕಾವೇರಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಒಂದು ಕಡೆ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿ ರೈತರ ಮೊಗದಲ್ಲಿ ಮಂದಹಾಸ ತರಿಸಿದೆ. ಆದರೆ ಈಗ ಕಾವೇರಿ ನದಿ ಪಾತ್ರದಲ್ಲಿ ಭಾರೀ ಪ್ರವಾಹ ಉಂಟಾಗಿ ಜನತೆಯಲ್ಲಿ ಭಯ ಹುಟ್ಟಿಸಿದ್ದು, ಕಾವೇರಿಯ ರೌದ್ರಾವತಾರ ಕಡಿಮೆಯಾಗಲಿ ಎಂದು ಜನತೆ ದೇವರ ಮೊರೆ ಹೋಗಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago