ಮಂಡ್ಯ

109 ಅಡಿಗೆ ತಲುಪಿದ ಕೆಆರ್‌ಎಸ್‌ ಜಲಾಶಯ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿದೆ.

ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರನ್ನು ನದಿಗೆ ಬಿಡಲಾಗಿದೆ. ಈ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಕೂಡ ಭರ್ತಿಯಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

ಜಲಾಶಯದ ಒಳಹರಿವು 35,000 ಕ್ಯೂಸೆಕ್ಸ್‌ಗೆ ಏರಿಕೆಯಾಗಿದ್ದು, ಹೊರಹರಿವನ್ನು 2957 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ. ಇದೀಗ 109 ಅಡಿಯಷ್ಟು ಕೆಆರ್‌ಎಸ್‌ ಜಲಾಶಯ ಭರ್ತಿಯಾಗಿದೆ.

ಜಲಾಶಯಕ್ಕೆ ಒಳಹರಿವು ಹೆಚ್ಚಾದಂತೆ ಹೊರಹರಿವನ್ನೂ ಹೆಚ್ಚಳ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಕಾವೇರಿ ನದಿಗೆ ಹೆಚ್ಚಿನ ನೀರನ್ನು ಬಿಡಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

3 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

3 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

3 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

3 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

3 hours ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

3 hours ago