ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿದೆ.
ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯತ್ತ ಸಾಗಿದೆ. ಪರಿಣಾಮ ಹಾರಂಗಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದೆ.
ಈ ಬೆನ್ನಲ್ಲೇ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಕೂಡ ಭರ್ತಿಯಾಗುತ್ತಿದ್ದು, ಅನ್ನದಾತರ ಮುಖದಲ್ಲಿ ಭಾರೀ ಮಂದಹಾಸ ಮನೆಮಾಡಿದೆ.
ಕೆಆರ್‌ಎಸ್ ಜಲಾಶಯದ ಒಳಹರಿವು 34000 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 2376 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ. ಈಗ 111.50 ಅಡಿಯಷ್ಟು ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ.
ಇನ್ನೂ ಜಲಾಶಯಕ್ಕ ಒಳಹರಿವು ಹೆಚ್ಚಾದಂತೆ ಯಾವುದೇ ಕ್ಷಣದಲ್ಲಾದರೂ ಹೊರಹರಿವನ್ನು ಹೆಚ್ಚಳ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿಗೆ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಲಾಗುತ್ತದೆ. ಪರಿಣಾಮ ಕಾವೇರಿ ನದಿಯ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನತೆ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…