ಮಂಡ್ಯ: ರಾಜ್ಯದ ಹಲವೆಡೆ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶಿಂಷಾ ನದಿಗೆ ಜೀವ ಕಳೆ ತಂದಂತಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನಲ್ಲಿ ಹರಿಯುವ ಶಿಂಷಾ ನದಿಯು ಮೈದುಂಬಿ ಹರಿಯುತ್ತಿದೆ.
ನದಿ ದಂಡೆಯ ಮೇಲೆ ಪ್ರಸಿದ್ಧ ಕೊಕ್ಕರೆ ಬೆಳ್ಳೂರು ಪಕ್ಷಿಧಾಮವಿದ್ದು, ಪ್ರಾಣಿ ಪಕ್ಷಿ ಸಂಕುಲಕ್ಕೆ ನೀರಿನ ಅಭಾವ ದೂರವಾಗಿದೆ.
ಇನ್ನು ನದಿ ಮೈದುಂಬಿ ಹರಿಯುತ್ತಿರುವುದರಿಂದ ಆ ಭಾಗದ ಜನರಲ್ಲೂ ಸಂತಸ ಮನೆಮಾಡಿದೆ.





