ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.
ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 960 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 113.25 ಅಡಿಗಳಾಗಿದೆ.
ಜಲಾಶಯದ ಸಂಪೂರ್ಣ ಭರ್ತಿಗೆ 11 ಅಡಿಗಳಷ್ಟೇ ಬಾಕಿಯಿದೆ. 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 35.118 ಟಿಎಂಸಿಯಷ್ಟು ನೀರು ಶೇಖರಣೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ.