ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೆಆರ್ಎಸ್ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ.
ಜಲಾಶಯಕ್ಕೆ 9,457 ಕ್ಯುಸೆಕ್ ನೀರು ಹರಿದುಬರುತ್ತಿದ್ದು, ಹೊರಹರಿವು 1,589 ಕ್ಯುಸೆಕ್ ಇದೆ. ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಜಲಾಶಯದ ಇಂದಿನ ನೀರಿನ ಮಟ್ಟ 102.98 ಅಡಿಗೆ ಏರಿಕೆಯಾಗಿದೆ. ಕೆಆರ್ಎಸ್ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಯಾಗಿದೆ.
ಮಳೆ ಮುಂದುವರಿದರೆ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹರಿದು ಬರಲಿದೆ ಎಂದು ಅಂದಾಜಿಸಲಾಗಿದ್ದು, ರೈತರಲ್ಲಿ ಮೊಗದಲ್ಲಿ ಮಂದಹಾಸ ಮನೆಮಾಡಿದೆ.




