Mysore
28
broken clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಭಾರೀ ಮಳೆಯ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಡ್ಯಾಂ ಭರ್ತಿಗೆ ಕೇವಲ 7 ಅಡಿಗಳಷ್ಟೇ ಬಾಕಿಯಿದೆ.

ಜಲಾಶಯದ ಇಂದಿನ ಒಳಹರಿವು 23,473 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 1000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 117.80 ಅಡಿಗಳಾಗಿದೆ.

49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 39.847 ಟಿಎಂಸಿ ನೀರು ಸಂಗ್ರಹವಾಗಿದೆ.

ಮಳೆ ಹೀಗೇಯೇ ಮುಂದುವರಿದರೆ ಇದೇ ತಿಂಗಳಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂದು ಅಂದಾಜಿಸಲಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

Tags:
error: Content is protected !!