ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಯ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಡ್ಯಾಂ ಭರ್ತಿಗೆ ಕೇವಲ 7 ಅಡಿಗಳಷ್ಟೇ ಬಾಕಿಯಿದೆ.
ಜಲಾಶಯದ ಇಂದಿನ ಒಳಹರಿವು 23,473 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 1000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 117.80 ಅಡಿಗಳಾಗಿದೆ.
49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 39.847 ಟಿಎಂಸಿ ನೀರು ಸಂಗ್ರಹವಾಗಿದೆ.
ಮಳೆ ಹೀಗೇಯೇ ಮುಂದುವರಿದರೆ ಇದೇ ತಿಂಗಳಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂದು ಅಂದಾಜಿಸಲಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…