ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ.
ಜಲಾಶಯದ ಇಂದಿನ ಒಳಹರಿವು 16 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 951 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 111 ಅಡಿಗೆ ತಲುಪಿದೆ. 49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 32.686 ಟಿಎಂಸಿ ನೀರು ಸಂಗ್ರಹವಾಗಿದೆ.
ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ:- ಕೆಆರ್‌ಎಸ್ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಸುಮಲತಾ ಅಂಬರೀಷ್ ವಿರೋಧ





