ಮಂಡ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ.

ಜಲಾಶಯದಲ್ಲಿ ಮೂರೇ ದಿನದಲ್ಲಿ 9 ಅಡಿ ನೀರು ಏರಿಕೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆ ಮಾಡಿದೆ.

ಇದನ್ನೂ ಓದಿ:- ಬೆಳಗಾವಿಯಲ್ಲಿ ಕೊರೊನಾ ಸೋಂಕಿತ 70 ವರ್ಷದ ವೃದ್ಧ ಸಾವು

ರೈತರ ಜೀವನಾಡಿಯಾಗಿರುವ ಕೆಆರ್‌ಎಸ್‌ ಜಲಾಶಯದ ಇಂದಿನ ಒಳಹರಿವು 22 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 630 ಕ್ಯೂಸೆಕ್ಸ್‌ಗಳಾಗಿದೆ. 49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 21.282 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 98 ಅಡಿಗಳಾಗಿದೆ. ನಾಳೆ ವೇಳೆಗೆ ಜಲಾಶಯದ ನೀರಿನ ಮಟ್ಟ 100 ಅಡಿ ತಲುಪುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

11 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

25 mins ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

33 mins ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

44 mins ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

1 hour ago

ಲೆಕ್ಕ ಕೇಳುವ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ…

1 hour ago