krs damm
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ.
ಜಲಾಶಯದಲ್ಲಿ ಮೂರೇ ದಿನದಲ್ಲಿ 9 ಅಡಿ ನೀರು ಏರಿಕೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆ ಮಾಡಿದೆ.
ಇದನ್ನೂ ಓದಿ:- ಬೆಳಗಾವಿಯಲ್ಲಿ ಕೊರೊನಾ ಸೋಂಕಿತ 70 ವರ್ಷದ ವೃದ್ಧ ಸಾವು
ರೈತರ ಜೀವನಾಡಿಯಾಗಿರುವ ಕೆಆರ್‌ಎಸ್ ಜಲಾಶಯದ ಇಂದಿನ ಒಳಹರಿವು 22 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 630 ಕ್ಯೂಸೆಕ್ಸ್‌ಗಳಾಗಿದೆ. 49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 21.282 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 98 ಅಡಿಗಳಾಗಿದೆ. ನಾಳೆ ವೇಳೆಗೆ ಜಲಾಶಯದ ನೀರಿನ ಮಟ್ಟ 100 ಅಡಿ ತಲುಪುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…