Mysore
30
few clouds

Social Media

ಮಂಗಳವಾರ, 27 ಜನವರಿ 2026
Light
Dark

ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ: ಕೆಆರ್‌ಎಸ್‌ ಹೊರಹರಿವು ಭಾರೀ ಹೆಚ್ಚಳ

KRS | Large Volume of Water Released into Cauvery River: Advisory Issued for Precaution

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.

ಕಳೆದ ಕೆಲ ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ ಕಂಡುಬಂದಿದ್ದು, ಜಲಾಶಯದ ಹೊರಹರಿವಿನಲ್ಲೂ ಏರಿಕೆ ಮಾಡಲಾಗಿದೆ.

ಜಲಾಶಯದ ಇಂದಿನ ಒಳಹರಿವು 70,072 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವು 1,01,268 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 124.54 ಅಡಿಗಳಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 48.824 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.

ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಟ್ಟಿರುವ ಹಿನ್ನೆಲೆಯಲ್ಲಿ ಕಾವೇರಿ‌ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದ್ದು, ಜನರು ಎಚ್ಚರಿಕೆಯ ಇರುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!