KRS | Large Volume of Water Released into Cauvery River: Advisory Issued for Precaution
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.
ಕಳೆದ ಕೆಲ ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ ಕಂಡುಬಂದಿದ್ದು, ಜಲಾಶಯದ ಹೊರಹರಿವಿನಲ್ಲೂ ಏರಿಕೆ ಮಾಡಲಾಗಿದೆ.
ಜಲಾಶಯದ ಇಂದಿನ ಒಳಹರಿವು 70,072 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವು 1,01,268 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 124.54 ಅಡಿಗಳಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 48.824 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.
ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಟ್ಟಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದ್ದು, ಜನರು ಎಚ್ಚರಿಕೆಯ ಇರುವಂತೆ ಸೂಚನೆ ನೀಡಲಾಗಿದೆ.
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…
ಪುರುಷರೂ ಎಚ್‌ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್‌ಕುಮಾರ್ ಮಂಡ್ಯ : ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…
ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…