ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.
ಕಳೆದ ಕೆಲ ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ ಕಂಡುಬಂದಿದ್ದು, ಜಲಾಶಯದ ಹೊರಹರಿವಿನಲ್ಲೂ ಏರಿಕೆ ಮಾಡಲಾಗಿದೆ.
ಜಲಾಶಯದ ಇಂದಿನ ಒಳಹರಿವು 33,052 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವು 80,000 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 124.54 ಅಡಿಗಳಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 49.089 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…