ಮಂಡ್ಯ: ನವೆಂಬರ್ ೦೧ರ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲೆಯ ಎಲ್ಲ ಮನೆಗಳಲ್ಲಿ, ಅಂಗಡಿ ಮುಗ್ಗಟ್ಟುಗಳು, ಹೋಟೆಲ್, ಮಾಲ್‌ಗಳ ಮುಂದೆ ಕನ್ನಡ ಧ್ವಜ ಹಾರಿಸಬೇಕು ಎಂದು ಕದಂಬಸೈನ್ಯ ಕನ್ನಡ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ನಡೆಸುವವರು ಬಹುತೇಕ ಕನ್ನಡ ವ್ಯಾಪಾರಸ್ಥರಾಗಿದ್ದು, ತಾವು ನೆಲೆಸಿರುವ ಕನ್ನಡ ನೆಲ ಜಲದ ಮೇಲೆ ಗೌರವವನ್ನು ಹೊಂದಿರಬೇಕು. ಮಂಡ್ಯ ಜಿಲ್ಲೆ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಾಗಿದ್ದು, ಇಲ್ಲಿ ಎಲ್ಲಾ ಕನ್ನಡಿಗರು ಸೇರಿದಂತೆ ಪ್ರತಿಯೊಬ್ಬರೂ ಕನ್ನಡ ರಾಜ್ಯೋತ್ಸವದ ದಿನದಂದು ಕನ್ನಡ ಧ್ವಜ ಹಾರಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಮನವಿ ಮಾಡಿದರು.
ಆಟೋ ಚಾಲಕರು ತಮ್ಮ ಆಟೋಗಳನ್ನು ಸಿಂಗರಿಸಿ, ಧ್ವಜ ಹಾರಿಸುವ ಮೂಲಕ ಕನ್ನಡದ ಹಬ್ಬವನ್ನು ಸ್ವಾಭಿಮಾನದಿಂದ ಆಚರಿಸುತ್ತಾರೆ. ಅವರು ನಿಜವಾದ ಕನ್ನಡ ಅಭಿಮಾನಿಗಳು. ಅವರಂತೆಯೇ ಎಲ್ಲರೂ ತಮ್ಮ ಮನೆ, ಮಳಿಗೆ ಬಳಿ ಕನ್ನಡ ಧ್ವಜ ಹಾರಿಸಿ ಸ್ವಾಭಿಮಾನದಿಂದ ಕ್ನನಡ ಅಭಿಮಾನ ವ್ಯಕ್ತಪಡಿಸುವಂತೆ ಕರೆ ನೀಡಿದರು.
ನವೆಂಬರ್ ೦೧ರಂದು ಸರ್ಕಾರಿ ಅಧಿಕಾರಿಗಳು ಕೇವಲ ಹಾಜರಾತಿ ಪುಸ್ತಕದಲ್ಲಿ ಸಹಿಹಾಕಲಸ್ಟೇ ಕಛೇರಿಗೆ ಆಗಮಿಸುತ್ತಿದ್ದು, ಜಿಲ್ಲಾಡಳಿತದಿಂದ ಆದೇಶ ಬಂದರೆ ಮಾತ್ರ ಕನ್ನಡ ಧ್ವಜ ಹಾರಿಸುವ ಕೆಲಸ ಮುಂದಾಗುತ್ತಾರೆ. ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ಕನ್ನಡ ಧ್ವಜ ಹಾರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಕರ್ನಾಟಕದಲ್ಲಿ ಶೇ.೬೦ರಷ್ಟು ಕನ್ನಡ ಫಲಕ ಬಳಸಲೇ ಬೇಕು ಎಂದು ಹೈಕೋರ್ಟ್ ತೀರ್ಪು ನೀಡಿರುವುದನ್ನು ಕದಂಬ ಸೈನ್ಯ ಕನ್ನಡ ಸಂಘಟನೆ ಸ್ವಾಗತಿಸುತ್ತದೆ ಎಂದು ಇದೇ ವೇಳೆ ತಿಳಿಸಿದರು.
ಗೋಷ್ಠಿಯಲ್ಲಿ ಸಹಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಸಂಚಾಲಕ ಆರಾದ್ಯ ಗುಡುಗನಹಳ್ಳಿ, ಜಿಲ್ಲಾ ಸಂಚಾಲಕ ಸಲ್ಮಾನ್ ಇದ್ದರು.
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…