ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಕೆಎಸ್‌ಆರ್‌ಟಿಎಸ್ ಬಸ್ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.
ಮಂಡ್ಯ ನಗರದ ಸಾಂಜೋ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಚಾಲಕನ ಅಜಾಗರೂಕತೆ ಹಾಗೂ ಬಸ್‌ನ ವೇಗಕ್ಕೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.