ಮಂಡ್ಯ : ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀರಂಗಪಟ್ಟಣದ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಶ್ರೀರಂಗಪಟ್ಟಣದ ಚೆಕ್ ಪೋಸ್ಟ್ ಬಳಿಯ ಶ್ರೀ ಸಾಯಿ ಆಶ್ರಯದ ಬಳಿಯ ಸೇತುವೆಯಲ್ಲಿ ಈ ಘಟನೆ ಸಂಭವಿಸಿದೆ. ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ.
ಮೃತ ವ್ಯಕ್ತಿ ಮತ್ತು ಗಾಯಾಳುವಿನ ವಿವರ ತಿಳಿದು ಬಂದಿಲ್ಲ.
ಸಚಿವರ ನೆರವು
ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವ ಎನ್.ಚಲುವರಾಯಸ್ವಾಮಿ ಗಾಯಾಳು ಮತ್ತು ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾಗಿರುವ ಬಸ್‌ಗೆ ಹುಡುಕಾಡ ನಡೆಸಿದ್ದಾರೆ. ಈ ಸಂಬಂಧ ಮಂಡ್ಯ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.




