ಮಂಡ್ಯ

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ಓರ್ವ ಸಾವು, ಮತ್ತೊರ್ವ ಗಂಭೀರ

ಮಂಡ್ಯ : ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀರಂಗಪಟ್ಟಣದ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಶ್ರೀರಂಗಪಟ್ಟಣದ ಚೆಕ್‌ ಪೋಸ್ಟ್‌ ಬಳಿಯ ಶ್ರೀ ಸಾಯಿ ಆಶ್ರಯದ ಬಳಿಯ ಸೇತುವೆಯಲ್ಲಿ ಈ ಘಟನೆ ಸಂಭವಿಸಿದೆ. ಬೈಕ್‌ಗೆ ಸಾರಿಗೆ ಬಸ್‌ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ.

ಮೃತ ವ್ಯಕ್ತಿ ಮತ್ತು ಗಾಯಾಳುವಿನ ವಿವರ ತಿಳಿದು ಬಂದಿಲ್ಲ.

ಸಚಿವರ ನೆರವು
ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವ ಎನ್.ಚಲುವರಾಯಸ್ವಾಮಿ ಗಾಯಾಳು ಮತ್ತು ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾಗಿರುವ ಬಸ್‌ಗೆ ಹುಡುಕಾಡ ನಡೆಸಿದ್ದಾರೆ. ಈ ಸಂಬಂಧ ಮಂಡ್ಯ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

7 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

7 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

8 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

8 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

8 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

9 hours ago