ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.
ಕೆಸ್ತೂರು ಗ್ರಾಮದ ಗಿರೀಶ್ ಎಂಬುವವರ ಪತ್ನಿ ದಿವ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ.
ಮದ್ದೂರು ತಾಲ್ಲೂಕಿನ ಮಾಚಳ್ಳಿ ಗ್ರಾಮದ ಗೋವಿಂದ ಅವರ ಪುತ್ರಿ ದಿವ್ಯ, ಕಳೆದ ಎಂಟು ವರ್ಷಗಳ ಹಿಂದೆ ಕೆಸ್ತೂರು ಗ್ರಾಮದ ಗಿರೀಶ್ ಎಂಬುವವರನ್ನು ಮದುವೆ ಆಗಿದ್ದರು.
ದಂಪತಿಗಳಿಬ್ಬರು ಕೆಸ್ತೂರು ಗ್ರಾಮದಲ್ಲಿ ಜಿಮ್ ಸೆಂಟರ್ ತೆರೆದು ಜೀವನ ಸಾಗಿಸುತ್ತಿದ್ದರು.
ಆದರೆ ಜಿಮ್‌ನಲ್ಲಿ ಯಾರೂ ಇಲ್ಲದ ವೇಳೆ ದಿವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





