ಮಂಡ್ಯ: ಶ್ರೀರಂಗಪಟ್ಟಣದ ಕೆಆರ್‌ಎಸ್ (ಕೃಷ್ಣಸಾಗರ ಅಣೆಕಟ್ಟೆ)ಯ ಬೃಂದಾವನ ಗಾರ್ಡನ್‌ನಲ್ಲಿ ನಿನ್ನೆ (ಜ.27) ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸುತ್ತಿರುವ ಬಗ್ಗೆ ವೀಡಿಯೋ ಮಾಡಿರುವ ಪ್ರವಾಸಿಗರೊಬ್ಬರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ.
ಬೃಂದಾವನ ಗಾರ್ಡನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅದನ್ನು ನಂದಿಸಲು ಅಲ್ಲಿನ ಸಿಬ್ಬಂದಿಗಳು ಬೆಂಕಿಯನ್ನು ನಂದಿರುವ ಕನಿಷ್ಠ ಸೌಕರ್ಯವು ಇಲ್ಲದೇ ಬಕೆಟ್ ಮೂಲಕ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದು ಇದನ್ನು ವೀಡಿಯೋ ಮಾಡಿರುವ ಪ್ರವಾಸಿಗ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಯನ್ನು ಟ್ಯಾಗ್ ಮಾಡಿದ್ದಾರೆ.
ಸಂಜೆ 5.30ಕ್ಕೆ ಬೆಂಕಿ ಕಾಣಿಸಿಕೊಂಡಿದೆ, 6.15, 6.45, 7ಕ್ಕೆ ವಿಡಿಯೋ ಶೂಟ್ ಮಾಡಿದ್ದೇನೆ. ಆದರೂ ಈ ಬಗ್ಗೆ ಯಾರು ಗಮನ ಹರಿಸಿಲ್ಲ. ಸಿಬ್ಬಂದಿಗಳಿಗೆ ಯಾವುದೇ ಉಪಕರಣಗಳಿಲ್ಲ, ನೀರಿನ ಬಕೆಟ್‌ನಿಂದ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬರೆದುಕೊಂಡು ವಿಡಿಯೋಗಳನ್ನು ಶೇರ್ ಮಾಡಿದ್ದಾರೆ.
ಹ್ಯಾಶ್ ಟ್ಯಾಗ್ ಬಳಸಿ #ಬೃಂದಾವನ ಗಾರ್ಡನ್ಸ್ #ಮಂಡ್ಯದಲ್ಲಿ ಬೆಂಕಿ ನಂದಿಸುವುದು ಹೀಗೆ.. ಎಂದು ಬರೆದುಕೊಂಡಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…