ಮಂಡ್ಯ: ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನರಸಿಂಹ ಎಂಬ ಆರೋಪಿ ಕುಡಿಯುವ ನೀರಿಗೆ ವಿಷ ಬೆರೆಸಿದ್ದು ಪತ್ನಿ ಹಾಗೂ ಇಬ್ಬಳು ಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಆರೋಪಿ ನರಸಿಂಹ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ್ದು, ಪತ್ನಿ ಕೀರ್ತನಾ (23), ಮಕ್ಕಳಾದ ಜಯಸಿಂಹ (4) ಹಾಗೂ ರಿಷಿಕಾ (1) ಮೃತಪಟ್ಟಿದ್ದಾರೆ. ಇನ್ನು ತಾನೂ ಸಹ ಈ ನೀರನ್ನು ಸೇವಿಸಿದ್ದು ಅಸ್ವಸ್ಥಗೊಂಡ ಆತನನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ನರಸಿಂಹ ಹಾಗೂ ಕೀರ್ತನಾ ಕಳೆದ ಐದು ವರ್ಷಗಳ ಹಿಂದೆ ವಿವಾಹವಾಗಿದ್ದು, ಪತಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎಂಬ ಕಾರಣಕ್ಕೆ ಕೀರ್ತನಾ ಪ್ರಶ್ನೆ ಎತ್ತಿದ್ದಾರೆ. ಈ ವಿಷಯಕ್ಕೆ ದಂಪತಿಗಳ ನಡುವೆ ಜಗಳ ನಡೆದಿದ್ದು, ಪತಿ ನೀರಿಗೆ ಕ್ರಿಮಿನಾಶಕ ಬೆರೆಸಿದ್ದಾನೆ. ಆರೋಪಿ ಕಟಿಂಗ್ ಶಾಪ್ ಇಟ್ಟುಕೊಂಡು ಕೆಲಸ ನಿರ್ವಹಿಸುತ್ತಿದ್ದು, ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…
ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ…
ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…
ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್ ಪವಾರ್…
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.…