ಮಂಡ್ಯ : ನಾನೊಬ್ಬ ಸಾಮಾನ್ಯ ವ್ಯಕ್ತಿಯೇ, ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಮಂಡ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 4 ಕೃಷಿ ವಿಶ್ವವಿದ್ಯಾಲಯಗಳು ಇವೆ 5 ನೇ ಯದಾಗಿ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯಾಗಿದೆ. ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ ತಂದಿದ್ದು ಒಳ್ಳೆಯದು ಎಂಬ ಭಾವನೆ ಉಳಿದವರಿಗಿಲ್ಲ ಎಂದು ಹೇಳಿದರು.
ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಮೂಲಸೌಕರ್ಯ ಕಲ್ಪಿಸಲು 100 ಕೋಟಿ ಅನುದಾನ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಾದ ಮೊದಲು ವರ್ಷದಲ್ಲೇ ಮೂಲಸೌಕರ್ಯ ಕಲ್ಪಿಸಲು ಸುಮಾರು 100 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಈಗಾಗಲೇ ಕ್ಯಾಬಿನೆಟ್ ನಲ್ಲಿ ಮಾಡಿ ಚರ್ಚೆ 23 ಕೋಟಿ ಮಂಜೂರು ಮಾಡಲಾಗಿದೆ ಶೀಘ್ರವೇ ಕಾಮಗಾರಿ ಪ್ರಾರಂಭವಾಗುತ್ತದೆ. ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಾದ ಮೊದಲನೇ ವರ್ಷದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಿರುವ ಉದಾಹರಣೆ ಎಲ್ಲೂ ಕಂಡಿಲ್ಲ ಇದರ ಕುರಿತಾಗಿ ಲಘುವಾಗಿ ಮಾತನಾಡುವುದನ್ನು ಬಿಡಬೇಕು ಎಂದರು.
ಇದನ್ನು ಓದಿ: ನಾಳೆ ಸಂವಿಧಾನ ದಿನಾಚರಣೆ ; ವಿಶೇಷ ಕಾರ್ಯಕ್ರಮ, ಸಂವಿಧಾನ ಜಾಗೃತಿ ಜಾಥಾಕ್ಕೆ ಸೂಚನೆ
ಕೃಷಿ ಮೇಳ ಆಯೋಜನೆಯಿಂದ ರೈತರಿಗೆ ಅನೇಕ ಅನುಕೂಲ ಉಂಟಾಗುತ್ತದೆ ಕೃಷಿಯಲ್ಲಿ ತಾಂತ್ರಿಕತೆ, ಹೊಸ ತಳಿಗಳ ಪರಿಚಯ ಹಾಗೂ ಮುಂತಾದ ರೀತಿಯಲ್ಲಿ ಕೃಷಿಮೇಳ ರೈತರಿಗೆ ನೆರವು ನೀಡುತ್ತದೆ. ಮಂಡ್ಯ ವಿಸಿ ಫಾರಂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯ ತನ್ನ ಮೊದಲ ಕೃಷಿ ಮೇಳ 2025 ದಲ್ಲೆ 350 ಕ್ಕೂ ಹೆಚ್ಚು ಕೃಷಿ ಮಳಿಗೆಗಳನ್ನು ತೆರೆಯಲಾಗಿದೆ ಇದು ಸಂತಸದ ಸಂಗತಿ ಎಂದು ಅಭಿಪ್ರಾಯಪಟ್ಟರು. ಸುಮಾರು 60 ಎಕರೆ ಪ್ರದೇಶಗಳಲ್ಲಿ 400 ರಿಂದ 500 ಹೆಚ್ಚಿನ ವಿವಿಧ ತಳಿಗಳ ಲೈವ್ ಪ್ರಾತ್ಯಕ್ಷಿಕೆಗಳನ್ನು ಸದರಿ ಕೃಷಿ ಮೇಳದಲ್ಲಿ ಕಾಣಬಹುದಾಗಿದೆ.
ಶುಗರ್ ಇರುವವರು ಸಹ ತಿನ್ನಬಹುದಾದ ಭತ್ತದ ತಳಿಯನ್ನು ಫಿಲಿಫೈನ್ಸ್ ದೇಶದ ಅಂತಾರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಜೊತೆ ಒಪ್ಪಂದ ಮಾಡಿಕೊಂಡು ನಮ್ಮಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿರುವ ಭತ್ತದ ತಳಿಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಹೇಳಿದರು. ಮೊದಲೆಲ್ಲ ಒಂದು ತಳಿಯನ್ನು ಅಭಿವೃದ್ಧಿಪಡಿಸಲು ಸುಮಾರು 10 ವರ್ಷಕ್ಕೂ ಹೆಚ್ಚಿನ ಕಾಲ ಅಗತ್ಯವಿತ್ತು ಆದರೆ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದ ಮೂಲಕ ಕೇವಲ ಎರಡು ವರ್ಷದಲ್ಲೇ ಅಭಿವೃದ್ಧಿ ಪಡಿಸಿಬಹುದಾಗಿದೆ. ಮಂಡ್ಯ ಕೃಷಿ ಮೇಳ 2025 ಅನ್ನು ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಶಿ
ವಮೊಗ್ಗ ಕೃಷಿ ವಿಶ್ವವಿದ್ಯಾನಿಲಯಕ್ಕೆ ಅನುಮೋದನೆ ದೊರೆತಿದ್ದು 2008 ರಲ್ಲಿ ಆದರೆ ಟೋಕನ್ ಅಡ್ವಾನ್ಸ್ ಆಗಿದ್ದು 2013 ರಲ್ಲಿ ಆದರೆ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಇವೆಲ್ಲವೂ ಒಂದೇ ವರ್ಷದಲ್ಲಿ ಆಗಿದೆ. ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಾದ ಆರು ತಿಂಗಳೊಳಗೆ ಯುಜಿಸಿ ಪಟ್ಟಿಗೆ ಸೇರಿದೆ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಾರಣ. ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ಸರಕಾರ ಕೊಟ್ಟ ಕೊಡುಗೆ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ಎಂದು ಹೇಳಿದರು. ನಂತರ ಕೃಷಿ ಮೇಳ 2025 ರ ಪೋಸ್ಟರ್ ಅನ್ನು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಬಿಡುಗಡೆ ಮಾಡಿದರು. ಸಭೆಯಲ್ಲಿ ಮೈ ಶುಗರ್ ಅಧ್ಯಕ್ಷ ಸಿ.ಡಿ ಗಂಗಾಧರ, ಮಂಡ್ಯ ಕೃಷಿ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಹರಿಣಿ ಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಡಿಸಿಸಿ ಬ್ಯಾಂಕ್ ನಿರ್ದೇಶಕ ಆಶೋಕ್,ಅಂಜನಾಶ್ರೀಕಾಂತ್,ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…