ರಾಮನಗರ: ನಾನು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಾರದು ಅಂತಾ ಇದ್ದೆ, ಆದರೆ ಅನಿವಾರ್ಯವಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್‌ಡಿಕೆ ಸಿಎಂ ಆಗಿದ್ದಾಗ 25 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದೇನೆ. ಚನ್ನಪಟ್ಟಣವನ್ನು ಬದುಕಿರುವವರೆಗೂ ನಾನು ಎಂದಿಗೂ ಮರೆಯುವುದಿಲ್ಲ. ಈಗಾಗಲೇ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಕೇಂದ್ರ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದೇನೆ. ನಮ್ಮ ಕೆಲಸ ಮಾಡುತ್ತಾನೆ ಅಂತಾ ಜನರು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದರು.
ರಾಮನಗರ ಅಭಿವೃದ್ಧಿ ಮಾಡಿದ್ದು ನಾನು ಮತ್ತು ಹೆಚ್ಡಿ ದೇವೇಗೌಡರು. ಅಣ್ಣ ತಮ್ಮ ಬಂದು ಏನು ಮಾಡಿದರು ಎಂದು ಡಿಕೆ ಬ್ರದರ್ಸ್ ವಿರುದ್ಧ ಕಿಡಿಕಾರಿದ್ರು. ಜೊತೆಗೆ ಅಂತಾರಾಷ್ಟ್ರೀಯ ಮಟ್ಟದ ರೇಷ್ಮೆ ಮಾರುಕಟ್ಟೆ ಮಾಡಿಸಿದೆ. ರೈತರಿಗಾಗಿ ಮ್ಯಾಂಗೋ ಯೂನಿಟ್ ಸ್ಥಾಪನೆ ಮಾಡಿದ್ದೆ. ರಾಜೀವ್ ಗಾಂಧಿ ಆಸ್ಪತ್ರೆ ಇಲ್ಲಿ ಮಾಡಿಸಲು ಪ್ರಯತ್ನಿಸಿದೆ. ಇವತ್ತು ನಿದ್ದೆಗಟ್ಟಿದ್ದಾರೆ. ಇಂತಹ 10 ಜನ ಹುಟ್ಟಿ ಬಂದರೂ ಏನು ಮಾಡುವುದಕ್ಕೂ ಆಗಲ್ಲ ಎಂದು ವಾಗ್ದಾಳಿ ನಡೆಸಿದರು.





