ಮಂಡ್ಯ

ಅನಿವಾರ್ಯವಾಗಿ ನಾನು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದೆ: ಹೆಚ್‌ಡಿಕೆ

ರಾಮನಗರ: ನಾನು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಾರದು ಅಂತಾ ಇದ್ದೆ, ಆದರೆ ಅನಿವಾರ್ಯವಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರದ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್‌ಡಿಕೆ ಸಿಎಂ ಆಗಿದ್ದಾಗ 25 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದೇನೆ. ಚನ್ನಪಟ್ಟಣವನ್ನು ಬದುಕಿರುವವರೆಗೂ ನಾನು ಎಂದಿಗೂ ಮರೆಯುವುದಿಲ್ಲ. ಈಗಾಗಲೇ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಕೇಂದ್ರ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದೇನೆ. ನಮ್ಮ ಕೆಲಸ ಮಾಡುತ್ತಾನೆ ಅಂತಾ ಜನರು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದರು.

ರಾಮನಗರ ಅಭಿವೃದ್ಧಿ ಮಾಡಿದ್ದು ನಾನು ಮತ್ತು ಹೆಚ್​ಡಿ ದೇವೇಗೌಡರು. ಅಣ್ಣ ತಮ್ಮ ಬಂದು ಏನು ಮಾಡಿದರು ಎಂದು ಡಿಕೆ ಬ್ರದರ್ಸ್​ ವಿರುದ್ಧ ಕಿಡಿಕಾರಿದ್ರು. ಜೊತೆಗೆ ಅಂತಾರಾಷ್ಟ್ರೀಯ ಮಟ್ಟದ ರೇಷ್ಮೆ ಮಾರುಕಟ್ಟೆ ಮಾಡಿಸಿದೆ. ರೈತರಿಗಾಗಿ ಮ್ಯಾಂಗೋ ಯೂನಿಟ್​​ ಸ್ಥಾಪನೆ ಮಾಡಿದ್ದೆ. ರಾಜೀವ್ ಗಾಂಧಿ ಆಸ್ಪತ್ರೆ ಇಲ್ಲಿ ಮಾಡಿಸಲು ಪ್ರಯತ್ನಿಸಿದೆ. ಇವತ್ತು ನಿದ್ದೆಗಟ್ಟಿದ್ದಾರೆ. ಇಂತಹ 10 ಜನ ಹುಟ್ಟಿ ಬಂದರೂ ಏನು ಮಾಡುವುದಕ್ಕೂ ಆಗಲ್ಲ ಎಂದು ವಾಗ್ದಾಳಿ ನಡೆಸಿದರು.

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago