Mysore
27
overcast clouds

Social Media

ಶನಿವಾರ, 13 ಜೂನ್ 2026
Light
Dark

ಟೋಲ್ ಸಂಗ್ರಹ ಬೇಡ ಅಂತ ನಿತಿನ್ ಗಡ್ಕರಿಗೆ ಮನವಿ ಮಾಡುವೆ : ಸಿಎಂ ಸಿದ್ದರಾಮಯ್ಯ

ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ವೀಕ್ಷಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂದೂರು ಗ್ರಾಮದ ಟೋಲ್ ಪ್ಲಾಜಾ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು.

ಟೋಲ್ ಸಂಗ್ರಹಿಸುವುದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರೋದಿಲ್ಲ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅದನ್ನು ನೋಡಿಕೊಳ್ಳುತ್ತದೆ, ಹೆದ್ದಾರಿ ಕಾಮಗಾರಿಯಲ್ಲಿ ಇನ್ನೂ ಬಹಳಷ್ಟು ಕೆಲಸಗಳು ಉಳಿದುಕೊಂಡಿರುವುದರಿಂದ ಟೋಲ್ ಸಂಗ್ರಹಿಸುವುದನ್ನು ನಿಲ್ಲಿಸ ಬೇಕೆಂದು ದೆಹಲಿಗೆ ಹೋದಾಗ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಮಾತಾಡುವುದಾಗಿ ಮುಖ್ಯಮಂತ್ರಿ ಹೇಳಿದರು.

ಸಿದ್ದರಾಮಯ್ಯ ಅವರಿಂದ ಅನುಮತಿ ಪಡೆದು ಮಾತು ಮುಂದುವರೆಸಿದ ಚಲುವರಾಯಸ್ವಾಮಿ, ಹಿಂದಿನ ಬಿಜೆಪಿ ಸರ್ಕಾರ ಎಕ್ಸ್ ಪ್ರೆಸ್ ವೇಯನ್ನು ನಿರ್ಲಕ್ಷಿಸಿದ ಕಾರಣ ಕಾಂಗ್ರೆಸ್ ಸರ್ಕಾರ ದೋಷಗಳನ್ನು ಸರಿ ಮಾಡಬೇಕಾಗಿ ಬಂದಿದೆ. ಏನೆಲ್ಲ ಕೆಲಸಗಳು ಆಗಬೇಕಿದೆ ಎಂಬ ಸೂಚನೆಗಳನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ, ಹೆಚ್ಚುವರಿ 151 ಕೋಟಿ ರೂ. ಗಳ ಪ್ರಸ್ತಾವನೆಯನ್ನೂ ಕೇಂದ್ರ ಸರ್ಕಾರಕ್ಕೆ ಕಳಿಸಲಾಗಿದೆ, ಆದಷ್ಟು ಬೇಗ ಹೆದ್ದಾರಿಯಲ್ಲಿನ ಎಲ್ಲ ದೋಷಗಳನ್ನು ಸರಿಪಡಿಸಲಾಗುವುದು ಎಂದು ಸಚಿವ ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!