ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ವೀಕ್ಷಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂದೂರು ಗ್ರಾಮದ ಟೋಲ್ ಪ್ಲಾಜಾ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು.
ಟೋಲ್ ಸಂಗ್ರಹಿಸುವುದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರೋದಿಲ್ಲ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅದನ್ನು ನೋಡಿಕೊಳ್ಳುತ್ತದೆ, ಹೆದ್ದಾರಿ ಕಾಮಗಾರಿಯಲ್ಲಿ ಇನ್ನೂ ಬಹಳಷ್ಟು ಕೆಲಸಗಳು ಉಳಿದುಕೊಂಡಿರುವುದರಿಂದ ಟೋಲ್ ಸಂಗ್ರಹಿಸುವುದನ್ನು ನಿಲ್ಲಿಸ ಬೇಕೆಂದು ದೆಹಲಿಗೆ ಹೋದಾಗ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಮಾತಾಡುವುದಾಗಿ ಮುಖ್ಯಮಂತ್ರಿ ಹೇಳಿದರು.
ಸಿದ್ದರಾಮಯ್ಯ ಅವರಿಂದ ಅನುಮತಿ ಪಡೆದು ಮಾತು ಮುಂದುವರೆಸಿದ ಚಲುವರಾಯಸ್ವಾಮಿ, ಹಿಂದಿನ ಬಿಜೆಪಿ ಸರ್ಕಾರ ಎಕ್ಸ್ ಪ್ರೆಸ್ ವೇಯನ್ನು ನಿರ್ಲಕ್ಷಿಸಿದ ಕಾರಣ ಕಾಂಗ್ರೆಸ್ ಸರ್ಕಾರ ದೋಷಗಳನ್ನು ಸರಿ ಮಾಡಬೇಕಾಗಿ ಬಂದಿದೆ. ಏನೆಲ್ಲ ಕೆಲಸಗಳು ಆಗಬೇಕಿದೆ ಎಂಬ ಸೂಚನೆಗಳನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ, ಹೆಚ್ಚುವರಿ 151 ಕೋಟಿ ರೂ. ಗಳ ಪ್ರಸ್ತಾವನೆಯನ್ನೂ ಕೇಂದ್ರ ಸರ್ಕಾರಕ್ಕೆ ಕಳಿಸಲಾಗಿದೆ, ಆದಷ್ಟು ಬೇಗ ಹೆದ್ದಾರಿಯಲ್ಲಿನ ಎಲ್ಲ ದೋಷಗಳನ್ನು ಸರಿಪಡಿಸಲಾಗುವುದು ಎಂದು ಸಚಿವ ಹೇಳಿದರು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…