ಮಂಡ್ಯ: ಮಂಡ್ಯ ಜಿಲ್ಲೆಗೆ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ತಂದು ಜಿಲ್ಲೆಯಲ್ಲಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುತ್ತೇನೆ ಎಂದು ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದರು.
ಜಿಲ್ಲೆಯ ನಿಡಘಟ್ಟದಲ್ಲಿ ಶನಿವಾರ (ಜೂನ್.15) ಪಕ್ಷದ ಕಾರ್ಯಕರ್ತರು, ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಗೂ ನನಗೂ ಹಾಗೂ ನಮ್ಮ ತಂದೆಯವರಿಗೂ ಅವಿನಾಭಾವ ಸಂಬಂಧವಿದೆ. ಹೀಗಾಗಿ ಈ ಬಾರಿಯ ಲೋಕ ಚುನಾವಣೆಯಲ್ಲಿಯೂ ನನ್ನನ್ನು ಬಹಳ ಅಂತರದಿಂದ ಗೆಲ್ಲುವಂತೆ ಮಾಡಿದ್ದೀರಿ. ಈ ಚುನಾವಣೆಯಲ್ಲಿ ನಿಲ್ಲಲ್ಲು ಪ್ರಧಾನಿ ಅವರ ಒತ್ತಡವಿತ್ತು ಹಾಗಾಗಿ ನಿಂತು ಗೆದ್ದೆ. ಇದಕ್ಕಾಗಿದೆ ಪ್ರಧಾನಿ ಮೋದಿ ಅವರು ನನಗೆ ಎರಡು ಖಾತೆಗಳನ್ನು ನೀಡಿದ್ದಾರೆ ಎಂದರು.
ದೇಶ ಹಾಗೂ ರಾಜ್ಯದ ರೈತರ ಬಗೆಗಿನ ಸಮಸ್ಯೆಗಳನ್ನು ಬಗೆಹರಿಸುವುದೇ ನನ್ನ ಮುಂದಿನ ದಿನಗಳ ಗುರಿಯಾಗಿದೆ. ಮಂಡ್ಯ ಜಿಲ್ಲೆ ಕಳೆದ 50 ವರ್ಷಗಳಿಂದಲೂ ಅಭಿವೃದ್ಧಿ ಕಂಡಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ದುಡಿಯಲಿದ್ದೇನೆ ಎಂದರು.
ಇನ್ನು ಮಂಡ್ಯ ಜಿಲ್ಲೆಗೆ ಅಗತ್ಯವಾಗಿ ಪರಿಹರಿಸಬೇಕಾಗಿರುವ ಕಾವೇರಿ ನೀರಿನ ಸಮಸ್ಯೆಗೆ ನ್ಯಾಯ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಬಳಿ ಧನಿ ಎತ್ತಿ ಕಾವೇರಿ ನ್ಯಾಯ ಕೊಡಿಸುವುದೇ ನನ್ನ ಮುಂದಿನ ಕೆಲಸ. ವಾರದಲ್ಲಿ ಒಂದು ದಿನವಾದರು ಬಂದು ನಿಮ್ಮ ಸೇವೆ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನನ್ನು ಬೆಳೆಸಿದ ಮಂಡ್ಯ ಜಿಲ್ಲೆಗೆ ನನ್ನ ಕೃತಜ್ಞತೆಗಳು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭಾವುಕರಾದರು.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…