ಮಂಡ್ಯ

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ ಜಾಗ ಕೊಡುವುದಕ್ಕೆ ನಾನು ಸಿದ್ಧನಿದ್ದೇನೆ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸವಾಲು ಹಾಕಿದರು.

ಕುಮಾರಸ್ವಾಮಿ ಅವರು ಮಾತನಾಡುವಾಗ ವಿವೇಚನೆಯಿಂದ ಮಾತನಾಡಬೇಕು. ಇಲ್ಲಿ ಯಾರೂ ದಡ್ಡರಿಲ್ಲ. ಕಳೆದ ಒಂದೂವರೆ ವರ್ಷದಲ್ಲಿ ಕೈಗಾರಿಕೆ ಸ್ಥಾಪನೆ ಬಗ್ಗೆ ಸರ್ಕಾರದ ಮುಂದೆಯಾಗಲಿ ಅಥವಾ ಜಿಡಳಿತದ ಮುಂದೆಯಾಗಲಿ ಒಂದೇ ಒಂದು ಪ್ರಸ್ತಾವನೆಯನ್ನು ಇಟ್ಟಿಲ್ಲ. ನಿರ್ದಿಷ್ಟವಾಗಿ ಈ ಕೈಗಾರಿಕೆಯನ್ನು ತರುತ್ತೇನೆಂದು ಹೇಳಿಲ್ಲ. ರಾಜ್ಯ ಸರ್ಕಾರ ಜಾಗ ಕೊಡುತ್ತಿಲ್ಲ, ಸಹಕಾರ ಕೊಡುತ್ತಿಲ್ಲ ಎನ್ನುತ್ತಿದ್ದಾರೆ. ಕೈಗಾರಿಕೆಯನ್ನು ಜಿಲ್ಲೆಗೆ ತರಲಾಗದಿರುವ ತಮ್ಮ ದೌರ್ಬಲ್ಯವನ್ನು ಸರ್ಕಾರವನ್ನು ಟೀಕಿಸುವ ಮೂಲಕ ತೋರ್ಪಡಿಸುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೇಂದ್ರದ ಕೊಡುಗೆ ಏನು?
ಕೇಂದ್ರ ಸರ್ಕಾರಕ್ಕೆ ಜಿಎಸ್‌ಟಿ ಹಣ ಪಾವತಿಯಲ್ಲಿ ಸರ್ಕಾರ ಮೊದಲ ಸ್ಥಾನದಲ್ಲಿದ್ದರೂ ಕೇಂದ್ರ ನೀಡಬೇಕಾದ ಹಣದಲ್ಲಿ ಕೊನೆಯ ಸ್ಥಾನದಲ್ಲಿದೆ. ರಾಜ್ಯ ಸರ್ಕಾರದ ಬೇಡಿಕೆಗಳಿಗೆ ಮನ್ನಣೆ ನೀಡದೆ ಕಿರುಕುಳ ನೀಡುತ್ತಿದೆ. ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆಗೆ ನೀಡಬೇಕಾದ ಹಣವನ್ನೂ ನೀಡದೆ ವಂಚಿಸುತ್ತಿದೆ. ಕೇಂದ್ರದ ಸಹಕಾರದಿಂದ ಶೈಕ್ಷಣಿಕವಾಗಿ ಎಷ್ಟು ಉನ್ನತ ಸಂಸ್ಥೆಗಳು ರಾಜ್ಯದಲ್ಲಿ ಸ್ಥಾಪನೆಯಾಗಿವೆ. ನಮ್ಮ ರಾಜ್ಯಕ್ಕೆ ಕೇಂದ್ರದ ಕೊಡುಗೆ ಏನು ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಇದನ್ನೂ ಓದಿ:-ಮೈಸೂರಿನಲ್ಲಿ ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್ ಅಳವಡಿಕೆ ಪ್ರಗತಿ : 1,100 ಕಿ.ಮೀ ವರೆಗೆ ಕೇಬಲ್ ಅಳವಡಿಕೆ

ಡಿ.21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಜಾಸೌಧಕ್ಕೆ ಶಿಲಾನ್ಯಾಸ ನೆರವೇರಿಸಲಾಗುತ್ತಿದೆ. ಇದೇ ಸಮಯದಲ್ಲಿ ಸಾಧ್ಯವಾದರೆ ತಾಲ್ಲೂಕು ಪತ್ರಕರ್ತರ ಸಂಘದ ಭವನಕ್ಕೆ ಸರ್ಕಾರದಿಂದ ಮಂಜೂರಾಗಿರುವ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನೂ ನೆರವೇರಿಸಲಾಗುವುದು. ನೀರಾವರಿಗೆ 800 ಕೋಟಿ ರೂ. ನೀಡಿರುವ ಮುಖ್ಯಮಂತ್ರಿ ಅವರಿಂದ ಮಳವಳ್ಳಿಯಲ್ಲಿ ಮುಂದೆ ಬೃಹತ್ ಕಾರ್ಯಕ್ರಮ ಆಯೋಜಿಸಿ ಹನಿ ಮತ್ತು ತುಂತುರು ನೀರಾವರಿ ಯೋಜನೆಗೆ ಚಾಲನೆ ನೀಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

3 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

3 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

3 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

4 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

4 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

5 hours ago