ಮಂಡ್ಯ

ಪ್ರಧಾನ ಮಂತ್ರಿ ಮಾಡಿದ್ರೂ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

ಮೈಸೂರು: ನನ್ನನ್ನು ರಾಷ್ಟ್ರಪತಿ, ಪ್ರಧಾನಿ ಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ. ರಾಜಕೀಯಕ್ಕೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು, ಆವಾಗ ರಾಜಕೀಯ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ, ವರ್ಗಗಳ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೂದ್ರ, ಮಹಿಳೆ, ದಲಿತರಿಗೆ ಆರ್‌ ಎಸ್‌ ಎಸ್‌ ಗರ್ಭಗುಡಿಯೊಳಗೆ ಪ್ರವೇಶ ಕೊಡಲ್ಲ. ಬಿಜೆಪಿ-ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ. ಹೀಗಾಗಿ ಅವರು ಮೀಸಲಾತಿಯನ್ನು ಇಷ್ಟಪಡುವುದಿಲ್ಲ ಎಂದರು.

ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು, ಈಗ ಮೋದಿಗೂ ತಮಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ರಾಜಕಾರಣಿಯಾದವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು ಎಂದು ಹೇಳಿದರು.

andolana

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago