Mysore
19
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಇಂಡಿಯಾ ಅಧಿಕಾರಕ್ಕೆ ಬಂದರೆ ರೈತರ, ಕಾರ್ಮಿಕರ, ವ್ಯಾಪಾರಿಗಳ ಸರ್ಕಾರವಾಗಿರುತ್ತೆ: ರಾಹುಲ್‌ ಗಾಂಧಿ

ಮಂಡ್ಯ: ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ, ಅದು ಸಾಮಾನ್ಯ ನಾಗರಿಕರು, ರೈತರು, ಬಡವರು, ಕಾರ್ಮಿಕರು ಮತ್ತು ವ್ಯಾಪರಿಗಳ ಸರ್ಕಾರವಾಗಿರುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು.

ಇಂದು(ಏ.17) ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿ ಸರ್ಕಾರ ಕೇವಲ 25 ಶ್ರೀಮಂತರಿಗಾಗಿ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಸಾಮಾನ್ಯ ನಾಗರಿಕರು, ರೈತರು, ಕಾರ್ಮಿಕರು ಮತ್ತು ವ್ಯಾಪಾರಿಗಳಿಗಾಗಿ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತದೆ ಎಂದರು.

ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲ ಮನ್ನಾ ಮಾಡುತ್ತೇವೆ ಮತ್ತು ರಾಜ್ಯದಲ್ಲಿ ಬಡ ಮಹಿಳೆಯರಿಗೆ ಈಗಾಗಲೇ ನೀಡುತ್ತಿರುವ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ 1 ಲಕ್ಷದ 24 ಸಾವಿರ ರೂಪಾಯಿ ನೀಡುತ್ತೇವೆ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಿಸುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುತ್ತೇವೆ. ಜೊತೆಗೆ ಉದ್ಯೋಗ ಭದ್ರತಾ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಮಹಿಳೆಯರಿಗೆ, ಯುವಕರಿಗೆ ಅನುಕೂಲವಾಗಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡಿದ್ದು, ಈ ವೇಳೆ ರೈತರ ಸಂಕಷ್ಟ ನೋಡಿದ್ದೇನೆ ಎಂದರು.

Tags: