ಮಂಡ್ಯ: ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ, ಅದು ಸಾಮಾನ್ಯ ನಾಗರಿಕರು, ರೈತರು, ಬಡವರು, ಕಾರ್ಮಿಕರು ಮತ್ತು ವ್ಯಾಪರಿಗಳ ಸರ್ಕಾರವಾಗಿರುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಇಂದು(ಏ.17) ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿ ಸರ್ಕಾರ ಕೇವಲ 25 ಶ್ರೀಮಂತರಿಗಾಗಿ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಸಾಮಾನ್ಯ ನಾಗರಿಕರು, ರೈತರು, ಕಾರ್ಮಿಕರು ಮತ್ತು ವ್ಯಾಪಾರಿಗಳಿಗಾಗಿ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತದೆ ಎಂದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲ ಮನ್ನಾ ಮಾಡುತ್ತೇವೆ ಮತ್ತು ರಾಜ್ಯದಲ್ಲಿ ಬಡ ಮಹಿಳೆಯರಿಗೆ ಈಗಾಗಲೇ ನೀಡುತ್ತಿರುವ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ 1 ಲಕ್ಷದ 24 ಸಾವಿರ ರೂಪಾಯಿ ನೀಡುತ್ತೇವೆ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಿಸುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುತ್ತೇವೆ. ಜೊತೆಗೆ ಉದ್ಯೋಗ ಭದ್ರತಾ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಮಹಿಳೆಯರಿಗೆ, ಯುವಕರಿಗೆ ಅನುಕೂಲವಾಗಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡಿದ್ದು, ಈ ವೇಳೆ ರೈತರ ಸಂಕಷ್ಟ ನೋಡಿದ್ದೇನೆ ಎಂದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…