Mysore
17
clear sky

Social Media

ಮಂಗಳವಾರ, 20 ಜನವರಿ 2026
Light
Dark

ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರುತ್ತೇನೆ: ಮಂಡ್ಯ ಎಸ್ಪಿಗೆ ಎಚ್‌.ಡಿ.ಕುಮಾರಸ್ವಾಮಿ ವಾರ್ನಿಂಗ್‌

ಮಂಡ್ಯ: ಯಾವುದೇ ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಮಂಡ್ಯ ಎಸ್ಪಿಗೆ ಕರೆ ಮಾಡಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಹಾಗೂ ಡಿಸಿಗೆ ಕರೆ ಮಾಡಿ ಮಾತನಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡಕ್ಕೆ ಮಣಿದರೆ ಖುದ್ದಾಗಿ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ಮದ್ದೂರು ಪಟ್ಟಣದ ರಾಮ್‌ ರಹೀಂ ನಗರದಲ್ಲಿ ಕಳೆದ ತಡರಾತ್ರಿ ಗಣಪತಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮರವಣಿಗೆ ಬಂದಿದ್ದು, ಯಾವುದೇ ಘೋಷಣೆ ಕೂಗಬಾರದು. ಮೈಕ್‌ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ಮೈಕ್‌ ಆಫ್‌ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್‌ ಆಫ್‌ ಮಾಡಿ ಏಕಾಏಕಿ ಗಣಪತಿ ಮೆರವಣಿಗೆಗೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದ ಬೆನ್ನಲ್ಲೇ ಪ್ರತಿಭಟನೆ ಜೋರಾಗಿ ನಡೆದಿದ್ದು, ಮದ್ದೂರಿನಲ್ಲಿ ನಾಳೆಯವರೆಗೂ ನಿಷೇಧಾಜ್ಞೆ ಜಾರಿಯಾಗಿದೆ.

Tags:
error: Content is protected !!