ಮಂಡ್ಯ: ಯಾವುದೇ ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಮಂಡ್ಯ ಎಸ್ಪಿಗೆ ಕರೆ ಮಾಡಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಹಾಗೂ ಡಿಸಿಗೆ ಕರೆ ಮಾಡಿ ಮಾತನಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡಕ್ಕೆ ಮಣಿದರೆ ಖುದ್ದಾಗಿ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಮದ್ದೂರು ಪಟ್ಟಣದ ರಾಮ್ ರಹೀಂ ನಗರದಲ್ಲಿ ಕಳೆದ ತಡರಾತ್ರಿ ಗಣಪತಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮರವಣಿಗೆ ಬಂದಿದ್ದು, ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್ ಆಫ್ ಮಾಡಿ ಏಕಾಏಕಿ ಗಣಪತಿ ಮೆರವಣಿಗೆಗೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದ ಬೆನ್ನಲ್ಲೇ ಪ್ರತಿಭಟನೆ ಜೋರಾಗಿ ನಡೆದಿದ್ದು, ಮದ್ದೂರಿನಲ್ಲಿ ನಾಳೆಯವರೆಗೂ ನಿಷೇಧಾಜ್ಞೆ ಜಾರಿಯಾಗಿದೆ.
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…
ಡಾ.ರಘುಪತಿ, ಚಿನಾಕಳ್ಳಿ ಅದು ೧೯೧೮ರ ಆಸುಪಾಸು. ಒಂದು ಕಡೆ ಖೇಡಾ ಸತ್ಯಾಗ್ರಹದ ಭರಾಟೆಯಲ್ಲಿ ದೇಶ ಮುಳುಗೇಳುತ್ತಿರುತ್ತದೆ.ಇನ್ನೊಂದೆಡೆ ರೌಲತ್ ಕಾಯ್ದೆಯ ಅಮಾನುಷ…
೨೨ ವಾರಗಳ ಗಾಂಧಿ ಅರಿವಿನ ಯಾನ ಮಹಾತ್ಮ ಗಾಂಧೀಜಿಯವರ ಜೊತೆಗಿನ ನಿಮ್ಮ ‘ಆಂದೋಲನ’ ಪತ್ರಿಕೆಯ ಅರಿವಿನ ಯಾನದ ಈ ವರ್ಷದ ಕೊನೆಯ…
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…