ಮಂಡ್ಯ: ನಿಮಗೆ ತಾಕತ್ತಿದ್ದರೆ ಡಿಕೆಶಿಯನ್ನು ಪಕ್ಷದಿಂದ ಅಮಾನತು ಮಾಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದರು ಅವರ ಹೇಳಿಕೆಗಳನ್ನು ದಿಕ್ಕರಿಸಿ ಡಿಕೆಶಿ ಕುಂಭಮೇಳಕ್ಕೆ ಹೋಗಿದ್ದಾರೆ. ಡಿಕೆಶಿ ಕಾಂಗ್ರೆಸ್ ಪಕ್ಷದ ಬೇರೆ ನಾಯಕರಂತಲ್ಲ, ತಮಗೆ ಬೇಕಾಗಿರುವುದನ್ನು ಒದ್ದು ಕಿತ್ತುಕೊಳ್ಳುವ ಜಾಯಮಾನ ಅವರದು ಎಂದು ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ವೇದಿಕೆ ಹಂಚಿಕೊಳ್ಳುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತಾರೆ. ಈ ತರ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದರೆ ಏನರ್ಥ ಎಂದು ನುಡಿದರು.
ಡಿಕೆಶಿ ಬಿಜೆಪಿ ಪಕ್ಷಕ್ಕೆ ಬರುವ ವಿಚಾರವಾಗಿ, ನಾವ್ಯಾರು ಡಿಕೆಶಿಯನ್ನು ಕರೆದಿಲ್ಲ. ಮೊದಲು ಅವರನ್ನು ಸಸ್ಪೆಂಡ್ ಮಾಡಲಿ ಮುಂದೆ ನೋಡೋಣಾ. ಇದರ ಬಗ್ಗೆ ಕೇಂದ್ರದ ನಾಯಕರೇ ಎಲ್ಲ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.





