Mysore
23
mist

Social Media

ಬುಧವಾರ, 31 ಡಿಸೆಂಬರ್ 2025
Light
Dark

ಮಂಡ್ಯ ಸೀಟು ಹಂಚಿಕೆ ಇನ್ನು ಅಂತಿಮಗೊಂಡಿಲ್ಲ: ಸಂಸದೆ ಸುಮಲತಾ!

ನವದೆಹಲಿ: ಮಂಡ್ಯ ಕಣಕ್ಕಾಗಿ ಸಂಸದೆ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್​ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಇಂದು (ಮಾರ್ಚ್ 18) ಬಿಜೆಪಿ ರಾಷ್ಟ್ರೀಯ ನಾಯಕ ಜೆಪಿ ನಡ್ಡಾ ಅವರನ್ನು ಭೇಟಿಯಾಗಿರುವ ಸುಮಾಲತಾ ಅಂಬರೀಶ್ ಮಂಡ್ಯದ ಸೀಟು ಹಂಚಿಕೆ ಇನ್ನೂ ಅಂತಿಮವಾಗಿಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಒಂದು ಸುದೀರ್ಘವಾದ ಚರ್ಚೆ ನಡೆಯಿತು. ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಜೊತೆ ಮಾತುಕತೆ ಮುಕ್ತಾಯವಾಗಿದೆ. ಮಂಡ್ಯದ ಬಗ್ಗೆ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಕ್ಷೇತ್ರದಿಂದಲೇ ಟಿಕೆಟ್​ ಕೊಡಲು ನಾನು ಕೇಳಿದ್ದೇನೆ. ಮೋದಿಯವರು ನನಗೆ ಭರವಸೆ ನೀಡಿದ್ದಾರೆ. ನಿಮ್ಮನ್ನ ಮತ್ತು ನಿಮ್ಮ ಕಾರ್ಯಕರ್ತರನ್ನ ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆ ಇಲ್ಲ ಎಂದು ಭರವಸೆ‌ ನೀಡಿದ್ದಾರೆ ಎಂದರು.

ನನ್ನ ಮುಂದಿನ ನಿರ್ಧಾರವನ್ನ ಕ್ಷೇತ್ರಕ್ಕೆ ತೆರಳಿ ನಮ್ಮ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಯಿಂದ ದೂರ ಹೋಗುವ ಪ್ರಶ್ನೆ ಇಲ್ಲ. ನಾನು ಸ್ಪರ್ಧೆ ಮಾಡಬೇಕು ಎನ್ನುವುದಕ್ಕಿಂತ ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕು. ಮಂಡ್ಯದಲ್ಲಿ ಸ್ಪರ್ಧೆ ಮಾಡಿದರೇ ಬಿಜೆಪಿ ಬೇಸ್‌ ಉಳಿಯಲಿದೆ ಎಂದರು.

ಜೊತೆಗೆ ನನ್ನ ಸಂಸತ್ ಅವಧಿ ಮುಕ್ತಾಯದ ನಂತರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದರು.

Tags:
error: Content is protected !!