ನವದೆಹಲಿ: ಮಂಡ್ಯ ಕಣಕ್ಕಾಗಿ ಸಂಸದೆ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಇಂದು (ಮಾರ್ಚ್ 18) ಬಿಜೆಪಿ ರಾಷ್ಟ್ರೀಯ ನಾಯಕ ಜೆಪಿ ನಡ್ಡಾ ಅವರನ್ನು ಭೇಟಿಯಾಗಿರುವ ಸುಮಾಲತಾ ಅಂಬರೀಶ್ ಮಂಡ್ಯದ ಸೀಟು ಹಂಚಿಕೆ ಇನ್ನೂ ಅಂತಿಮವಾಗಿಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.
ಒಂದು ಸುದೀರ್ಘವಾದ ಚರ್ಚೆ ನಡೆಯಿತು. ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಜೊತೆ ಮಾತುಕತೆ ಮುಕ್ತಾಯವಾಗಿದೆ. ಮಂಡ್ಯದ ಬಗ್ಗೆ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಕ್ಷೇತ್ರದಿಂದಲೇ ಟಿಕೆಟ್ ಕೊಡಲು ನಾನು ಕೇಳಿದ್ದೇನೆ. ಮೋದಿಯವರು ನನಗೆ ಭರವಸೆ ನೀಡಿದ್ದಾರೆ. ನಿಮ್ಮನ್ನ ಮತ್ತು ನಿಮ್ಮ ಕಾರ್ಯಕರ್ತರನ್ನ ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆ ಇಲ್ಲ ಎಂದು ಭರವಸೆ ನೀಡಿದ್ದಾರೆ ಎಂದರು.
ನನ್ನ ಮುಂದಿನ ನಿರ್ಧಾರವನ್ನ ಕ್ಷೇತ್ರಕ್ಕೆ ತೆರಳಿ ನಮ್ಮ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಯಿಂದ ದೂರ ಹೋಗುವ ಪ್ರಶ್ನೆ ಇಲ್ಲ. ನಾನು ಸ್ಪರ್ಧೆ ಮಾಡಬೇಕು ಎನ್ನುವುದಕ್ಕಿಂತ ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕು. ಮಂಡ್ಯದಲ್ಲಿ ಸ್ಪರ್ಧೆ ಮಾಡಿದರೇ ಬಿಜೆಪಿ ಬೇಸ್ ಉಳಿಯಲಿದೆ ಎಂದರು.
ಜೊತೆಗೆ ನನ್ನ ಸಂಸತ್ ಅವಧಿ ಮುಕ್ತಾಯದ ನಂತರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದರು.
ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್‌ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…
ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ…
ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…