Categories: ಮಂಡ್ಯ

ಅಕ್ರಮ ಹುಕ್ಕ ಬಾರ್:‌ ಬೆಂಬಲಿಸದ್ದವರ ಬಂಧನಕ್ಕೆ ಸತೀಶ್‌ ಆಗ್ರಹ

ಮಂಡ್ಯ: ಬೂದನೂರು ಗ್ರಾಮದ ಬೇಲೂರು ರಸ್ತೆಯ ಗದ್ದೆ ಬಯಲಿನಲ್ಲಿ ಪ್ಲೊಕಫೆ ಎಂಬ ಹುಕ್ಕಾ ಬಾರ್‌ನಲ್ಲಿ ಅಪ್ರಾಪ್ತರು ಅಕ್ರಮವಾಗಿ ಒಳ ಪ್ರವೇಶಿಸಿ ಕಳವು ಮಾಡಿದ್ದಲ್ಲದೇ, ಹುಕ್ಕಾ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕಾ ಮಾರಾಟಕ್ಕೆ ಬೆಂಬಲಿಸಿದ್ದವರ ಬಂಧಿಸಿ ತನಿಖೆ ನಡೆಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡ ಬಿ.ಕೆ.ಸತೀಶ್ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದರಿ ಸ್ಥಳದಲ್ಲಿ ಹುಕ್ಕಾಬಾರ್‌ಗೆ ೨೦೨೨ರಲ್ಲಿ ಅನುಮತಿ ಪಡೆದಿದ್ದು, ೨೦೨೪ರಲ್ಲಿ ಹುಕ್ಕಾ ಬಾರ್‌ಗೆ ಸರ್ಕಾರ ನಿಷೇಧ ಏರಿದ್ದರು, ಅಕ್ರಮವಾಗಿ ಹುಕ್ಕಾ ಬಾರ್ ನಡೆಯುತ್ತಿದ್ದು, ಇದನ್ನು ಗಮನಿಸಿದ ಅಪ್ರಾಪ್ತ ಬಾಲಕರು ಕಳವು ಮಾಡಿರುವುದು ಅಲ್ಲಿನ ಸಿಸಿಟಿವಿ ದೃಶ್ಯಗಳಿಂದ ಬಹಿರಂಗಗೊಂಡಿತ್ತು, ಈಗ ಅಪ್ರಾಪ್ತನೊಬ್ಬ ಹುಕ್ಕ ಸೇವನೆಯ ವಿಡಿಯೋಗಳು ಹರಿದಾಡುತ್ತಿವೆ ಎಂದು ತಿಳಿಸಿದರು.

ಈ ಪ್ರಕರಣ ನಡೆದ ಸ್ಥಳವು ಗೋಮಾಳವಾಗಿದ್ದು, ಇದನ್ನು ಯಾವುದೇ ರೀತಿಯಲ್ಲಿ ವಾಣಿಜ್ಯ ವಹಿವಾಟಿಗೆ ನೀಡಲು ಅವಕಾಶವಿಲ್ಲದಿದ್ದರೂ ಬೂದನೂರು ಗ್ರಾ.ಪಂ ಪಿಡಿಓ ಸದಸ್ಯರ ಒತ್ತಾಯದ ಮೇರೆಗೆ ಅನುಮತಿ ನೀಡಿದ್ದಾನೆ. ಅದಲ್ಲದೆ ಈ ಪ್ರಕರಣ ಹೊರತಂದವರ ವಿರುದ್ಧವೇ ದೂರು ದಾಖಲಿಸುವಂತಹ ಘಟನೆಗಳು ನಡೆದಿವೆ ಎಂದರು.

ಹುಕ್ಕಾಬಾರ್ ವಿಷಯವಾಗಿ ದಾಖಲೆಗಳನ್ನು ತಿರುಚುವ ಕೆಲಸವಾಗುತ್ತಿದೆ. ಸಂಬಂಧಿತ ಇಲಾಖೆಗಳು ತಮ್ಮ ವೈಪಲ್ಯವನ್ನು ಮುಚ್ಚಿಹಾಕಲು ಪ್ರಯತ್ನ ನಡೆಸುತ್ತಿದ್ದಾರೆ. ಜಿಲ್ಲಾಡಳಿತ ವೈಪಲ್ಯವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಕರುನಾಡ ಸೇವಕರು ಸಂಘಟನೆಯ ಮೈಸೂರು ವಿಭಾಗೀಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಮಾತನಾಡಿ, ಅಪ್ರಾಪ್ತರ ಮೊಬೈಲ್ ವಶಕ್ಕೆ ಪಡೆದು ಸಾಂತ್ವನ ಕೇಂದ್ರಕ್ಕೆ ಕಳುಹಿಸಬೇಕಾದ ಕೆಲಸವನ್ನು ಪೊಲೀಸ್ ಇಲಾಖೆ ಮಾಡುವಲ್ಲಿ ವೈಫಲ್ಯ ತೋರಿದೆ. ಪೊಲೀಸ್ ಇಲಾಖೆ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳದೇ ಅಕ್ರಮ ಪರವಾಗಿ ಕೆಲಸ ಮಾಡುತ್ತಿದೆ ಎಂದು ದೂರಿದರು.

ಈ ಪ್ರಕರಣ ಸಂಬಂಧ ವೈಫಲ್ಯ ತೋರಿದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಬೂದನೂರು ಗ್ರಾ.ಪಂ ಪಿಡಿಓ ವಿರುದ್ಧ ಕ್ರಮ ಕೈಗೊಳ್ಳಬೇಕು. ತತ್ತಕ್ಷಣ ಅಪ್ರಾಪ್ತ ಬಾಲಕರ ಮೊಬೈಲ್ ವಶಕ್ಕೆ ಪಡೆಯಬೇಕು. ಹೆಚ್ಚಿನ ಮಟ್ಟದ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಅಂಬೇಡ್ಕರ್ ವಾರಿಯರ್ಸ್‌ನ ರಾಜ್ಯಾಧ್ಯಕ್ಷ ಗಂಗರಾಜು, ಕರಾವೆ(ಶಿವರಾಮೇಗೌಡ ಬಣ) ಜಿಲ್ಲಾಧ್ಯಕ್ಷ ಜಯರಾಮ್, ಸುನೀಲ್, ಕುಳ್ಳ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

6 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

6 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

6 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

7 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

8 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

8 hours ago