ಮಂಡ್ಯ : ನಗರದ ಶುಗರ್ ಟೌನ್‌ನಲ್ಲಿರುವ ರಸಗೊಬ್ಬರ ಗೋದಾಮಿನಲ್ಲಿ ಗುಜರಾತ್ ರಾಜ್ಯದ ವಡೋದರ ಜಿಲ್ಲೆಯ ಫರ್ಟಿಲೈಜರ‍್ಸ್ ಅಂಡ್ ಕೆಮಿಕಲ್ಸ್ ಲಿ. (ಜಿಎಸ್‌ಎಫ್‌ಸಿ)ಗೆ ಸೇರಿದ, ಪರವಾನಗಿ ಇಲ್ಲದೆ ಶೇಖರಿಸಿದ್ದ ೪೯.೬ ಟನ್ ರಸಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ.
ರಸಗೊಬ್ಬರವನ್ನು ಅಕ್ರಮವಾಗಿ ಶೇಖರಿಸಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಜಾಗೃತ ಕೋಶದ ಅಪರ ನಿರ್ದೇಶಕ ದೇವರಾಜು, ಮೈಸೂರು ಉಪ ವಿಭಾಗದ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಉಪ ಕೃಷಿ ನಿರ್ದೇಶಕಿ ಎಚ್.ಎನ್. ಮಮತ ಮತ್ತು ಸಹಾಯಕ ಕೃಷಿ ನಿರ್ದೇಶಕ ಯಾದವ ಬಾಬು, ಮಂಡ್ಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಸುನೀತ, ಜಿಲ್ಲಾ ರಸಗೊಬ್ಬರ ಪರಿವೀಕ್ಷಕ ಎಚ್.ಚನ್ನಕೇಶವಮೂರ್ತಿ ಅವರು ದಾಳಿ ನಡೆಸಿ, ಪರಿಶೀಲಿಸಿದಾಗ ಪರವಾನಗಿ ಇಲ್ಲದ ರಸಗೊಬ್ಬರವನ್ನು ಜಪ್ತಿ ಮಾಡಿದ್ದಾರೆ ಎಂದು ಮಂಡ್ಯ ಕೃಷಿ ಜಂಟಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕ (ಜಾರಿದಳ) ಹಾಗೂ ರಸಗೊಬ್ಬರ ಪರಿವೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:-ಅ.14,15 ರಂದು ಮೈಸೂರಲ್ಲಿ ಬೌದ್ಧ ಮಹಾ ಸಮ್ಮೇಳನ
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…