ಮಂಡ್ಯ

ಅಕ್ರಮವಾಗಿ ಸಂಗ್ರಹಿಸಿದ್ದ ರಸಗೊಬ್ಬರ ಜಪ್ತಿ

ಮಂಡ್ಯ : ನಗರದ ಶುಗರ್ ಟೌನ್‌ನಲ್ಲಿರುವ ರಸಗೊಬ್ಬರ ಗೋದಾಮಿನಲ್ಲಿ ಗುಜರಾತ್ ರಾಜ್ಯದ ವಡೋದರ ಜಿಲ್ಲೆಯ ಫರ್ಟಿಲೈಜರ‍್ಸ್ ಅಂಡ್ ಕೆಮಿಕಲ್ಸ್ ಲಿ. (ಜಿಎಸ್‌ಎಫ್‌ಸಿ)ಗೆ ಸೇರಿದ, ಪರವಾನಗಿ ಇಲ್ಲದೆ ಶೇಖರಿಸಿದ್ದ ೪೯.೬ ಟನ್ ರಸಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ.

ರಸಗೊಬ್ಬರವನ್ನು ಅಕ್ರಮವಾಗಿ ಶೇಖರಿಸಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಜಾಗೃತ ಕೋಶದ ಅಪರ ನಿರ್ದೇಶಕ ದೇವರಾಜು, ಮೈಸೂರು ಉಪ ವಿಭಾಗದ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಉಪ ಕೃಷಿ ನಿರ್ದೇಶಕಿ ಎಚ್.ಎನ್. ಮಮತ ಮತ್ತು ಸಹಾಯಕ ಕೃಷಿ ನಿರ್ದೇಶಕ ಯಾದವ ಬಾಬು, ಮಂಡ್ಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಸುನೀತ, ಜಿಲ್ಲಾ ರಸಗೊಬ್ಬರ ಪರಿವೀಕ್ಷಕ ಎಚ್.ಚನ್ನಕೇಶವಮೂರ್ತಿ ಅವರು ದಾಳಿ ನಡೆಸಿ, ಪರಿಶೀಲಿಸಿದಾಗ ಪರವಾನಗಿ ಇಲ್ಲದ ರಸಗೊಬ್ಬರವನ್ನು ಜಪ್ತಿ ಮಾಡಿದ್ದಾರೆ ಎಂದು ಮಂಡ್ಯ ಕೃಷಿ ಜಂಟಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕ (ಜಾರಿದಳ) ಹಾಗೂ ರಸಗೊಬ್ಬರ ಪರಿವೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:-ಅ.14,15 ರಂದು ಮೈಸೂರಲ್ಲಿ ಬೌದ್ಧ ಮಹಾ ಸಮ್ಮೇಳನ

ಆಂದೋಲನ ಡೆಸ್ಕ್

Recent Posts

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

2 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

7 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

19 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

24 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

29 mins ago