ಮಂಡ್ಯ: ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಕೊಪ್ಪದಲ್ಲಿ ನಿರ್ಮಿಸಲಾಗಿರುವ ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡವನ್ನು ಭಾನುವಾರ ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಕಳೆದ ಐದು ವರ್ಷದಿಂದ ದುರಸ್ಥಿಯಲ್ಲಿ ಇದ್ದ ಕೊಪ್ಪ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡವನ್ನು ಕೆಡವಿ, ರೈತರಿಗೆ ಸಾರ್ವಜನಿಕರು ಅನುಕೂಲವಾಗುವಂತೆ ನೂತನ ಕಟ್ಟಡ ನಿರ್ಮಿಸಿರುವುದು ಸಂತಸ ಎಂದು ಹೇಳಿದರು.
ವ್ಯವಸಾಯ ಸಂಘದ ಸದಸ್ಯರು ವಿವಿಧ ಬೇಡಿಕೆಗಳನ್ನು ಕೃಷಿ ಸಚಿವರ ಮುಂದಿಟ್ಟರು, ಮುಂದಿನ ದಿನಗಳಲ್ಲಿ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂತೋಷ್, ಕೆ, ಆರ್ ಪೇಟೆ ಮಾಜಿ ಶಾಸಕ ಚಂದ್ರಶೇಖರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.