ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.
ಜಲಾಶಯದ ಇಂದಿನ ಒಳಹರಿವು 19,129 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 354 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 92 ಅಡಿಗಳಿಗೆ ಏರಿಕೆಯಾಗಿದೆ. ಕೇವಲ 24 ಗಂಟೆಯಲ್ಲಿ ಜಲಾಶಯಕ್ಕೆ 2 ಟಿಎಂಸಿ ನೀರು ಹರಿದು ಬಂದಿದ್ದು, 3 ಅಡಿಯಷ್ಟು ಡ್ಯಾಂ ಭರ್ತಿಯಾಗಿದೆ.
ಇದನ್ನೂ ಓದಿ:- ಪಿರಿಯಾಪಟ್ಟಣ| ಸಿನಿಮಿಯಾ ಸ್ಟೈಲ್‌ನಲ್ಲಿ ಉರುಳಿ ಬಿದ್ದ ಲಾರಿ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತಲೂ ಮೊದಲೇ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದ್ದು, ಹೆಚ್ಚಿನ ಮಳೆಯಾದರೆ ಜಲಾಶಯ ಆದಷ್ಟು ಬೇಗ ಭರ್ತಿಯಾಗಲಿದೆ.





