ಮಂಡ್ಯ

ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಹೆಚ್ಚಿದ ಅಪಘಾತ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸುಮಲತಾ

ಮಂಡ್ಯ : ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರದ ಸಮಯವನ್ನು ತಗ್ಗಿಸುವ ನಿಟ್ಟಿನಲ್ಲಿ ನಿರ್ಮಾಣ ಮಾಡಲಾಗಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಬಗ್ಗೆ ಸದನದಲ್ಲೂ ಚರ್ಚೆಯಾಯಿತು.

ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಹಿನ್ನೆಲೆ ಎನ್​​ಹೆಚ್​ಐ ಅಧಿಕಾರಿಗಳನ್ನು ಸಂಸದೆ ಸುಮಲತಾ ತರಾಟೆಗೆ​ ತೆಗೆದುಕೊಂಡಿದ್ದಾರೆ. ಮಂಡ್ಯ ಜಿಲ್ಲಾ ಪಂಚಾಯತ್​ನ ಕಾವೇರಿ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಮತನಾಡಿದ ಅವರು ​​ದಿನೇ ದಿನೇ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಸರಿಯಾದ ಸರ್ವಿಸ್‌ ರಸ್ತೆಗಳಿಲ್ಲ. ಚರಂಡಿ ಕಾಮಗಾರಿಗಳು ಅಲ್ಲಲ್ಲಿ ಇನ್ನು ಬಾಕಿ ಇದೆ ಎಂದು ತರಾಟೆಗೆ ತೆಗೆದುಕೊಂಡರು.

ಅಲ್ಲದೇ ಇದರ ನಡುವೆ ದಿನೇ ದಿನೇ ಅಪಘಾತಗಳಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮೊನ್ನೆ ಚನ್ನಪಟ್ಟಣದ ಬಳಿ ಒಂದು ಟ್ರಕ್​ನ ದೃಶ್ಯ ನೋಡಿದರೇ ಮೈ ನಡುಗಿಸುತ್ತೆ. ರಸ್ತೆ ಇರುವುದು ಜನರ ಅನುಕೂಲಕ್ಕೆ. ಜನರ ಪ್ರಾಣ ಕಳೆದುಕೊಳ್ಳುವುದಕ್ಕಲ್ಲ. ಆದಷ್ಟೂ ಬೇಗ ಹೆದ್ದಾರಿ ಸಮಸ್ಯೆಗಳನ್ನು ಸರಿಪಡಿಸಿ. ಇಲ್ಲವಾದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

lokesh

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

3 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

4 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

4 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

4 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

4 hours ago