KRS Dam
ಬೆಂಗಳೂರು: ಕೆಆರ್‌ಎಸ್ ಜಲಾಶಯದ ಒಳಹರಿವು ಕ್ಷೀಣಿಸಿರುವ ನಡುವೆಯೇ ಹೊರಹರಿವು ಹೆಚ್ಚಳವಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ.
ತಮಿಳುನಾಡಿಗೆ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಹೊರಹರಿವನ್ನು 3,834ರಿಂದ 5,333 ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ. ಆದರೆ ಜಲಾಶಯಕ್ಕೆ ಹರಿದುಬರುತ್ತಿರುವ ನೀರು ಕೇವಲ 483 ಕ್ಯೂಸೆಕ್ ಎಂದು ವರದಿಯಾಗಿದೆ.
ಜಲಾಶಯದಲ್ಲಿ ಒಟ್ಟು 20.006 ಟಿಎಂಸಿ ನೀರಿದ್ದು, ಬಳಕೆಗೆ ಯೋಗ್ಯ ನೀರು ಸುಮಾರು 13 ಟಿಎಂಸಿ ಎಂದು ತಿಳಿಸಲಾಗಿದೆ.
ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 2,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ. ಈ ಕುರಿತು ನವೆಂಬರ್ 25ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ.
ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ತೊಂದರೆಯಾಗಬಹುದೆಂಬ ಆತಂಕ ವ್ಯಕ್ತವಾಗಿದೆ.
ಶ್ರೀರಂಗಪಟ್ಟಣ: ನಂಜನಗೂಡಿನ ದೇವಸ್ಥಾನಕ್ಕೆ ಹೊರಟಿದ್ದ ಎರಡು ಕುಟುಂಬಗಳ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದೆ. ಮೈಸೂರು–ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಸರಕು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತೆ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ಈ…
ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿಯ ನಡುವೆ ಮಳೆಯ ಮುನ್ಸೂಚನೆಯೂ ಬಂದಿದೆ. ನವೆಂಬರ್ 24 ಮತ್ತು 25ರಂದು ಬೆಂಗಳೂರು ಸೇರಿದಂತೆ ದಕ್ಷಿಣ…
ರಾಜ್ಯದ ಕೆಲವು ಹೋಟೆಲ್ಲುಗಳಲ್ಲಿ ಗ್ರಾಹಕರಿಗೆ ಕುಡಿಯಲು ನೀರು ಕೊಡದೇ ಬಾಟಲ್ ನೀರು ಖರೀದಿಸುವಂತೆ ಹೇಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ…
ರಾಗಿಮುದ್ದೆ ಕರ್ನಾಟಕದ ಸಾಂಪ್ರದಾಯಿಕ ಆಹಾರ. ಎಚ್.ಡಿ. ದೇವೇಗೌಡರು ಪ್ರಧಾನಿಯಾಗಿದ್ದಾಗ ರಾಗಿಮುದ್ದೆ ರಾಷ್ಟ್ರಮಟ್ಟದಲ್ಲಿ ಪರಿಚಯಗೊಂಡಿತ್ತು. ಆದರೂ ಅದರ ಬಳಕೆ ವ್ಯಾಪಕವಾಗಿರಲಿಲ್ಲ. ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರೂ…
ಜನರಿಂದ ಆಯ್ಕೆಯಾದ ಶಾಸಕರು ತಮ್ಮ ಕ್ಷೇತ್ರದ ಜನರಿಗೆ ಯಾವ ದಿನ, ಯಾವ ಸಮಯದಲ್ಲಿ ಲಭ್ಯವಿರುತ್ತಾರೆ ಎಂಬ ಮಾಹಿತಿ ತಿಳಿದಿರಬೇಕು. ತಮ್ಮ…