ಮಂಡ್ಯ: ಬ್ರಿಟೀಷರ ದಾಸ್ಯದಿಂದ 1947 ಆಗಸ್ಟ್ 15 ರಂದು ಭಾರತ ಮಾತೆ ಸ್ವಾತಂತ್ರ‍್ಯಗೊಂಡ ಈ ಶುಭದಿನವನ್ನು ಪ್ರತಿಯೊಬ್ಬ ಭಾರತೀಯರು ತಮ್ಮ ಅಂತಃಕರಣದಿಂದ ಗೌರವಿಸಬೇಕಿರುತ್ತದೆ ಹಾಗೂ ಪವಿತ್ರಭಾವನೆಯೊಂದಿಗೆ ಸ್ಮರಿಸಬೇಕಿರುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಸರ್ ಎಂ.ವಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಈ ದೇಶವನ್ನು ಬ್ರಿಟೀಷರ ಕಪಿಮುಷ್ಠಿಯಿಂದ ಮುಕ್ತಿಗೊಳಿಸಲು ಸಹಸ್ರಾರು ಭಾರತೀಯರು ತಮ್ಮ ತನು-ಮನ-ಧನವನ್ನು ತ್ಯಾಗಮಾಡಿದ್ದಾರೆ ಎಂದರು.
•ಮಹಾತ್ಮಗಾಂಧೀಜಿ, ಜವಾಹರ್ ಲಾಲ್ ನೆಹರು, ಬಾಲಗಂಗಾಧರ ತಿಲಕ್, ಸರ್ದಾರ್ ವಲ್ಲಭಬಾಯಿಪಟೇಲ್, ಭಗತ್ಸಿಂಗ್, ಸುಭಾಷ್ ಚಂದ್ರಬೋಸ್, ಸರೋಜಿನಿನಾಯ್ಡು, ಕಿತ್ತೂರುರಾಣಿ ಚೆನ್ನಮ್ಮ, ಝಾನ್ಸಿರಾಣಿ ಲಕ್ಷ್ಮೀಭಾಯಿ ಮುಂತಾದ ಅನೇಕ ಹೋರಾಟಗಾರರ ಪರಿಶ್ರಮದಿಂದ ನಾವಿಂದು ಸ್ವಾತಂತ್ರ‍್ಯದ ಫಲವನ್ನು ಅನುಭವಿಸುತ್ತಿದ್ದೇವೆ. ಈ ಸುಸಂದರ್ಭದಲ್ಲಿ ದೇಶದ ಸ್ವಾತಂತ್ರ‍್ಯಕ್ಕಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ ಮಹನೀಯರನ್ನು ನೆನೆದುಆತ್ಮಪೂರ್ವಕವಾಗಿ ಗೌರವ ಸಲ್ಲಿಸ ಬಯಸುತ್ತೇನೆ ಎಂದರು
•ಭಾರತ ದೇಶ ಬ್ರಿಟೀಷರ ಆಳ್ವಿಕೆಯಲ್ಲಿದ್ದಾಗ ಸ್ವಾತಂತ್ರ‍್ಯದ ಕಿಚ್ಚು ನಾಡಿನೆಲ್ಲೆಡೆ ಹರಡಿ ಚಳುವಳಿಯ ರೂಪ ಪಡೆಯಿತು. ಸಾವಿರಾರು ಮಂದಿಯ ಬಲಿದಾನವಾಯಿತು. ಸ್ವಾತಂತ್ರ‍್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆಯನ್ನು ಮರೆಯುವಂತಿಲ್ಲ. ಕನ್ನಡಿಗರ ಧಮನಿಧಮನಿಯಲ್ಲಿ ಸ್ವಾತಂತ್ರ‍್ಯ ಹೋರಾಟದ ಕಿಚ್ಚು ಪ್ರಜ್ವಲಿಸಲು ಅನೇಕ ಚೇತನಗಳು ಪ್ರೇರಕಶಕ್ತಿಯಾಗಿದ್ದವು ಎಂದರು.
ಕಿತ್ತೂರು ರಾಣಿಚೆನ್ನಮ್ಮ, ಸಂಗೊಳ್ಳಿರಾಯಣ್ಣ, ಗಂಗಾಧರರಾವ್ ದೇಶಪಾಂಡೆ, ಆರ್ಆರ್ದಿವಾಕರ್, ಎನ್.ಎಸ್.ಹರ್ಡೀಕರ್, ಆಲೂರು ವೆಂಕಟರಾಯರು, ಸದಾಶಿವರಾಯರು, ನಿಜಲಿಂಗಪ್ಪ ಸೇರಿದಂತೆ ಸಾವಿರಾರು ಮಂದಿ ಸ್ವಾತಂತ್ರ‍್ಯ ಚಳುವಳಿಯ ಭಾಗವಾಗಿದ್ದನ್ನು ನಾವಿಲ್ಲಿ ಸ್ಮರಿಸಬೇಕಿದೆ ಎಂದರು.
•ಸ್ವಾತಂತ್ರ‍್ಯ ಹೋರಾಟಕ್ಕೆ ಮಂಡ್ಯ ಜಿಲ್ಲೆಯ ಕೊಡುಗೆಯೂ ಅಪಾರ. ಸಾಹುಕಾರ್ ಚನ್ನಯ್ಯ, ಟಿ.ಮರಿಯಪ್ಪ, ಮಳವಳ್ಳಿ ವೀರಪ್ಪ, ಕಾಂಗ್ರೆಸ್‌ಸುಬ್ಬಯ್ಯ, ಎ.ಸಿ.ಭೈರಪ್ಪ, ಎ.ಜಿ.ಬಂದೀಗೌಡ, ಹೆಚ್.ಕೆ.ವೀರಣ್ಣಗೌಡ, ಇಂಡುವಾಳು ಹೊನ್ನಯ್ಯ ಸೇರಿದಂತೆ ಸಾಕಷ್ಟು ಜನರು ಈ ಮಹತ್ತರ ಕಾರ್ಯದಲ್ಲಿ ತಮ್ಮನ್ನು ತಾವು ಆತ್ಮಾರ್ಪಣೆ ಮಾಡಿಕೊಂಡಿರುವುದನ್ನು ನಾವೆಲ್ಲರೂ ನೆನಪಿಸಿಕೊಳ್ಳಬೇಕಿದೆ ಎಂದರು.
•ಭಾರತ ಸ್ವಾತಂತ್ರ‍್ಯ ಹೊರಾಟದ ಚರಿತ್ರೆಯಲ್ಲಿ ಶಿವಪುರದ ಧ್ವಜಸತ್ಯಾಗ್ರಹ ಅವಿಸ್ಮರಣಿಯ ಮೈಲಿಗಲ್ಲು. ಭಾರತದಲ್ಲಿ ಸ್ವಾತಂತ್ರ‍್ಯದ ಹೋರಾಟ ನಡೆಯುವಾಗ 1938ರ ಏಪ್ರಿಲ್ 9 ರಂದು ಶಿವಪುರದ ತಿರುಮಲೇಗೌಡ ಅವರ ಜಮೀನಿನಲ್ಲಿ ಧ್ವಜರೋಹಣ ಮಾಡಲು ಸಾವಿರಾರು ಸಂಖ್ಯೆಯಲ್ಲಿ ಹೋರಾಟಗಾರರು ಸೇರಿ, ಯಾವುದೇ ಬೆದರಿಕೆಗೂ ಬಗ್ಗದೆ, ಧೈರ್ಯವಾಗಿ ಭಾರತದ ತ್ರಿವರ್ಣಧ್ವಜವನ್ನು ಆರೋಹಣ ಮಾಡಿ ಪೊಲೀಸರ ಬಂಧನಕ್ಕೆ ಒಳಗಾದರು. ಇದರ ಸ್ಮರಣಾರ್ಥವಾಗಿ ಶಿವಪುರದಲ್ಲಿ ಸತ್ಯಾಗ್ರಹಸೌಧವನ್ನು ನಿರ್ಮಿಸಿರುವುದು ಶ್ಲಾಘನೀಯ. ಇದು ಮಂಡ್ಯ ಜಿಲ್ಲೆಯ ಹೆಮ್ಮೆ ಎಂದರು
ಏಕತೆ, ಸತ್ಯಾಗ್ರಹ, ಅಹಿಂಸೆ ಹಾಗೂ ಶಾಂತಿ ಮಾರ್ಗವನ್ನು ಅನುಸರಿಸಿ ಬ್ರಿಟೀಷರ ಸ್ವಾತಂತ್ರ‍್ಯಗಳಿಸಿ ಕೊಂಡಿರುವುದರಿಂದಲೇ ನಮ್ಮ ದೇಶ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಶಾಂತಿ ಮಾರ್ಗದಿಂದ ಸ್ವಾತಂತ್ರ‍್ಯಗಳಿಸಿದ ಕೀರ್ತಿ ನಮ್ಮ ಭಾರತಕ್ಕೆ ಸಲ್ಲಬೇಕು ಎಂದರು.
ಅನ್ನ ಭಾಗ್ಯ: ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಸದರಿ ಯೋಜನೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ 4,50,000 (ನಾಲ್ಕು ಲಕ್ಷದ ಐವತ್ತು ಸಾವಿರ) ಫಲಾನುಭವಿಗಳು ಇದರ ಸದೂಪಯೋಗ ಪಡೆಯುತ್ತಿದ್ದಾರೆ ಹಾಗೂ 5 ಕೆ.ಜಿ. ಅಕ್ಕಿಗೆ ಪರ್ಯಾಯವಾಗಿ ನಗದು ರೂಪದಲ್ಲಿ ನೇರ ನಗದು ವರ್ಗಾವಣೆ ಮಾಡಿದ್ದು, ಇಲ್ಲಿಯವರೆಗೆ ರೂ.287 ಕೋಟಿ ಹಣವನ್ನು ಫಲಾನುಭವಿಗಳಿಗೆ ವರ್ಗಾಯಿಸಲಾಗಿರುತ್ತದೆ ಎಂದರು.
ಶಕ್ತಿ ಯೋಜನೆ: ಎಲ್ಲಾ ವರ್ಗದ ಮಹಿಳೆಯರ ಸಬಲೀಕರಣಕ್ಕಾಗಿ ಮತ್ತು ಆರ್ಥಿಕ ಸಬಲೀಕರಣದ ಉದ್ದೇಶದಿಂದಾಗಿ ಶಕ್ತಿಯೋಜನೆಯನ್ನು ಜಾರಿಗೆತಂದಿದ್ದು, ಯಶಸ್ವಿಯಾಗಿ ಈ ಯೋಜನೆಯು ಅನುಷ್ಠಾನಗೊಳ್ಳುತ್ತಿದೆ. ಎಲ್ಲಾ ಮಹಿಳೆಯರೂ ಕೂಡ ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಒಂದು ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸುಮಾರು 6 ಕೋಟಿ ಮಹಿಳೆಯರು ಉಚಿತವಾಗಿ ಶಕ್ತಿಯೋಜನೆಯಡಿ ಪ್ರಯಾಣಿಸಿರುತ್ತಾರೆ ಎಂದರು
ಗೃಹ ಜ್ಯೋತಿ: ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಪರಿಕಲ್ಪನೆಯನ್ವಯ ಗೃಹಜ್ಯೋತಿ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ಸುಮಾರು 4,60,000 (ನಾಲ್ಕು ಲಕ್ಷದ ಅರವತ್ತು ಸಾವಿರ) ಗ್ರಾಹಕರು ಸದುಪಯೋಗ ಪಡೆದುಕೊಂಡಿರುತ್ತಾರೆ. ಇದರಿಂದ ರೂ. 192 ಕೋಟಿ ಮೊತ್ತದ ವಿದ್ಯುತ್ ಬಿಲ್ಲನ್ನು ಉಚಿತವಾಗಿ ನೀಡಲಾಗಿರುತ್ತದೆ ಎಂದರು.
ಗೃಹ ಲಕ್ಷ್ಮಿ: ಮಹಿಳೆ ಮನೆಯೊಳಗೆ ಆರ್ಥಿಕವಾಗಿ ಶಕ್ತಿವಂತಳಾದರೆ ಸಮಾಜದ ಅಭಿವೃದ್ದಿಗೂ ಪೂರಕವಾಗುತ್ತದೆ ಎಂಬ ದೃಷ್ಠಿಯಿಂದ ಮತ್ತು ಮಹಿಳೆ ಮನೆಯೊಳಗಿನ ದೀಪವಾದರೆ ಸಮಾಜವನ್ನು ಬೆಳಗುತ್ತಾಳೆ ಎಂಬ ಉದ್ದೇಶವನ್ನಿಟ್ಟುಕೊಂಡು ಮಹಿಳೆಯ ‘ಆರ್ಥಿಕ ಸಬಲೀಕರಣ’ಕ್ಕಾಗಿ ಪ್ರತಿ ತಿಂಗಳು ರೂ.2,000 (ರೂ.ಎರಡು ಸಾವಿರ) ನೀಡಲಾಗುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 4,50,000(ನಾಲ್ಕು ಲಕ್ಷದ ಐವತ್ತು ಸಾವಿರ) ಫಲಾನುಭವಿಗಳಿದ್ದು, ಇದುವರೆವಿಗೂ ರೂ.851 ಕೋಟಿ ಮೊತ್ತವನ್ನು ಈ ಯೋಜನೆಯಲ್ಲಿ ಪಾವತಿಸಲಾಗಿರುತ್ತದೆ ಎಂದರು.
ಯುವ ನಿಧಿ: ಯುವಕರಲ್ಲಿ ಉದ್ಯೋಗ ಅರಸುವಾಗ ನಿರಾಶಾಭಾವನೆ ಮೂಡದಿರಲಿ ಎಂಬ ಉದ್ದೇಶದಿಂದ ಅವರಿಗೆ ಅನುಕೂಲಕರವಾಗುವಂತೆ ನಿರುದ್ಯೋಗದ ಸಮಯದಲ್ಲಿ ಪ್ರಯೋಜನವಾಗುವ ಉದ್ದೇಶದಿಂದ‘ ಯುವನಿಧಿ ಯೋಜನೆ’ಯನ್ನು ಜಾರಿಗೊಳಿಸಿದ್ದು, ಮಂಡ್ಯ ಜಿಲ್ಲೆಯಲ್ಲಿ ಈವರೆಗೆ 4,300 (ನಾಲ್ಕು ಸಾವಿರ ಮುನ್ನೂರು) ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆಯನ್ನು ಪಾವತಿಸಲಾಗಿದೆ ಎಂದರು.
ಕನ್ನಡ ಸಾಹಿತ್ಯ ಸಮ್ಮೇಳನ
•ಮಂಡ್ಯ ಜಿಲ್ಲೆಯು ಹಲವು ಸಾಹಿತಿಗಳ ತವರಾಗಿದ್ದು, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಮೊದಲನೇ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನವು 1973ರಲ್ಲಿ ಮತ್ತು ಎರಡನೇ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನವು 1994ರಲ್ಲಿ ಜರುಗಿದ್ದು, ಹೆಮ್ಮೆಯ ಸಂಗತಿ. ಅದೇ ರೀತಿ ಮೂರನೇ ಬಾರಿಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಕ್ಕರೆ ನಾಡು ಮಂಡ್ಯದಲ್ಲಿ ಆತಿಥ್ಯ ವಹಿಸಲು ಅವಕಾಶ ಸಿಕ್ಕಿರುವುದು, ನಮ್ಮೆಲ್ಲರಿಗೂ ಸಂತೋಷದ ವಿಷಯವಾಗಿದೆ. ಈ ವರ್ಷ ಡಿಸೆಂಬರ್-20, 21 ಮತ್ತು 22 ರಂದು ಮೂರು ದಿನಗಳ ಕಾಲ ಅರ್ಥಪೂರ್ಣವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಿದ್ದು, ನಾಡಿನಾದ್ಯಂತ ಕನ್ನಡಾಭಿಮಾನಿಗಳು ಸಾಹಿತ್ಯಾಸಕ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಹಾಗಾಗಿ ಇದನ್ನು ನಾವು ಹಬ್ಬದಂತೆ ಸಂಭ್ರಮಿಸಬೇಕು ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲರೂ ಒಂದು ಕೂಡಿ ಸಹಕಾರ ಸಮನ್ವಯತೆಯಿಂದ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ವಿನಂತಿಸುತ್ತೇನೆ ಎಂದರು
*ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರ*ವನ್ನು ದುರಸ್ಥಿಗೊಳಿಸಬೇಕೆಂಬ ಬೇಡಿಕೆಯನ್ನು ಕಲಾವಿದರು, ಸಾಹಿತ್ಯಾಸಕ್ತರು ಹಲವಾರು ದಿನಗಳಿಂದ ಒತ್ತಾಯಿಸಿದ್ದು, ಇದರಂತೆ ರೂ.63 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ದುರಸ್ಥಿ ಕಾರ್ಯ ಮುಕ್ತಾಗೊಂಡಿರುತ್ತದೆ. ಅಲ್ಲಿರುವ ಆಸನಗಳನ್ನೂ ಸಹ ಬದಲಾಯಿಸಬೇಕೆಂಬ ಕಲಾವಿದರು ಸಾಹಿತ್ಯಾಸಕ್ತರ ಮನವಿಯಂತೆ ಹೆಚ್ಚುವರಿಯಾಗಿ, ರೂ.50 ಲಕ್ಷ ರೂಪಾಯಿ ಬಿಡುಗಡೆಗೊಳಿಸಲಾಗುತ್ತಿದೆ ಎಂದರು.
ಮಂಡ್ಯ ಮೈಷುಗರ್ ಕಾರ್ಖಾನೆ ಆವರಣದಲ್ಲಿ ಹೊಸಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡಲು ಘೋಷಣೆ ಮಾಡಲಾಗಿರುತ್ತದೆ. ಇದರಂತೆ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲಾಗುತ್ತಿದೆ. ಮಂಡ್ಯ ಜಿಲ್ಲೆಯ ರೈತ ಮುಖಂಡರ ಹಾಗೂ ಕಬ್ಬುಬೆಳಗಾರರ ಜೊತೆ ಸಮಾಲೋಚನೆ ನಡೆಸಿ, ಹೊಸ ಕಾರ್ಖಾನೆ ನಿರ್ಮಾಣ ಅಥವಾ ಪುನಃಶ್ಚೇತನಗೊಳಿಸುವ ಸಂಬAಧ ತೀರ್ಮಾನಿಸಲಾಗುವುದು.
•ಮಂಡ್ಯ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಕೃಷಿಗೆ ಪೂರಕವಾದ ಅನೇಕ ಚಟುವಟಿಕೆಗಳನ್ನು ನಡೆಸಲು ಸೂಕ್ತವಾದ ಜಿಲ್ಲೆಯಾಗಿದೆ. ಕೃಷಿಯಲ್ಲಿ ಹೊಸ ಹೊಸ ವಿಧಾನಗಳು ಅಳವಡಿಕೆ, ವೈಜ್ಞಾನಿಕ ಉಪಕರಣಗಳ ಬಳಕೆ, ಕೃಷಿಯಲ್ಲಿ ತಂತ್ರಜ್ಞಾನದ ಬಳಕೆಯ ಸಾಧ್ಯತೆಗಳನ್ನು ಉತ್ತೇಜಿಸಲು, ಅನೇಕ ಹೊಸ ವಿಷಯಗಳ ಅಧ್ಯಯನವನ್ನು ಉತ್ತೇಜಿಸುವ ಸಲುವಾಗಿ, ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಘೋಷಣೆ ಮಾಡಲಾಗಿದೆ ಎಂದರು.
ಕೆ.ಆರ್.ಎಸ್. ಅಣೆಕಟ್ಟೆಯ ಬೃಂದಾವನ ಉದ್ಯಾನವನ್ನು ವಿಶ್ವ ದರ್ಜೆಯ ಪ್ರವಾಸೋದ್ಯಮ ಆಕರ್ಷಣೆಯ ಕೇಂದ್ರವನ್ನಾಗಿ ಉನ್ನತೀಕರಿಸುವ ಸಲುವಾಗಿ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸುವ ಮೂಲಕ ಜನಪ್ರಿಯ ಪ್ರವಾಸಿ ತಾಣವನ್ನಾಗಿ ಮಾಡಿ, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಉದ್ದೇಶಿಸಲಾಗಿದೆ ಎಂದರು.
ವಿಶ್ವೇಶ್ವರಯ್ಯ ನಾಲೆಯು 92 ವರ್ಷ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿರುವ ಕಾರಣ ಸಮಗ್ರ ಅಚ್ಚುಕಟ್ಟು ಪ್ರದೇಶಕ್ಕೆ ಶೀಘ್ರವಾಗಿ, ಸಮರ್ಪಕವಾಗಿ ನೀರನ್ನು ಹಂಚಿಕೆ ಮಾಡುವ ದೃಷ್ಠಿಯಿಂದ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿಯನ್ನು ಕೈಗೆತ್ತುಕೊಂಡಿದ್ದು, ಸುಮಾರು ರೂ.300 ಕೋಟಿ ಅಂದಾಜು ವೆಚ್ಛದ ಕಾಮಗಾರಿಯ ಪೈಕಿ, ಶೇಕಡ 60 ರಷ್ಟು ಕಾಮಗಾರಿ ಮುಕ್ತಾಯಗೊಂಡಿರುತ್ತದೆ ಎಂದರು.
ವಿಶ್ವೇಶ್ವರಯ್ಯ ನಾಲೆಯ ಅಚ್ಚು ಕಟ್ಟಿನಲ್ಲಿ ಬರುವ ಸಂಪರ್ಕ ಶಾಖಾ ನಾಲಾ, ತುರಗನೂರು ಶಾಖಾ ನಾಲಾ, ಹೆಬಕವಾಡಿ ಮತ್ತು ನಿಡಘಟ್ಟ ಶಾಖಾ ನಾಲಾಗಳನ್ನು ಆಧುನೀಕರಣ ಕಾರ್ಯ ರೂ.400 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ವಿಜ್ಞಾನ ಕೇಂದ್ರಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮಂಡ್ಯ ಜಿಲ್ಲಾ ಆಸ್ವತ್ರೆಯಲ್ಲಿ ದಾಖಲಾಗುವ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆನೀಡಲು ʼಆಧುನಿಕ ಕ್ರಿಟಿಕಲ್ಕೇರ್ಬ್ಲಾಕ್ʼ ಅನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು.
•ಮಂಡ್ಯ ಜಿಲ್ಲೆಯ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆ ಒದಗಿಸುವ ಉದ್ದೇಶದಿಂದ ಜಿಲ್ಲಾ ಆಸ್ಪತ್ರೆಯಲ್ಲಿʼ ಉತ್ತಮಬಪ್ರಯೋಗಾಲಯವನ್ನು ಸ್ಥಾಪಿಸಲಾಗುತ್ತಿದೆ ಎಂದರು.
ಈ ವರ್ಷ ವರುಣನ ಕೃಪೆಯಿಂದ ಮತ್ತು ಕಾವೇರಿ ತಾಯಿಯ ಕೃಪೆಯಿಂದ ಉತ್ತಮ ಮಳೆಯಾಗಿದ್ದು, ನಮ್ಮೆಲ್ಲರ ಜೀವನಾಡಿಯಾಗಿರುವ ಕೆ.ಆರ್.ಎಸ್. ಅಣೆಕಟ್ಟೆಯು ತುಂಬಿರುವುದು, ಮಂಡ್ಯ ಜಿಲ್ಲೆಯ ರೈತ ಬಾಂಧವರಲ್ಲಿ ಸಂತಸವನ್ನು ಮೂಡಿಸಿದೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯ ಮಂತ್ರಿಗಳು ಕೆ.ಆರ್.ಎಸ್.ಗೆ ಬಾಗೀನ ಅರ್ಪಿಸಿರುತ್ತಾರೆ. ರೈತರ ಬೆಳೆಗಳಿಗೆ ಯಾವುದೇ ತೊಡಕಾಗದಂತೆ ನೀರು ಪೂರೈಸಲು, ನೀರನ್ನು ಹರಿಸಲು ಕ್ರಮವಹಿಸಲಾಗುವುದು ಎಂದರು.
•ಮಳವಳ್ಳಿ ತಾಲ್ಲೂಕಿನ ಪೂರಿಗಾಲಿ ನೀರಾವರಿ ಯೋಜನೆಯನ್ನು ರೂ.593 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ 51 ಗ್ರಾಮಗಳ 21 ಸಾವಿರ ಎಕರೆ ಪ್ರದೇಶಕ್ಕೆ ಹನಿ ನೀರಾವರಿ ಒದಗಿಸಲು ಈಗಾಗಲೇ ಕಾಮಗಾರಿ ಮುಕ್ತಾಯಗೊಂಡಿರುತ್ತದೆ. ಶೀಘ್ರದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದರು
•ಒಂದೇ ಸೂರಿನಡಿ ಕೃಷಿ ಮತ್ತು ಕೃಷಿ ಸಂಬಂಧಿತ ಎಲ್ಲಾ ಯೋಜನೆಗಳು ರೈತರಿಗೆ ತಲುಪಬೇಕು ಎಂಬ ಸದುದ್ದೇಶದಿಂದ 8 ರೈತ ಸಂರ್ಪಕ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ ಎಂದರು.
ಎಲ್ಲಾ ಇಲಾಖೆಗಳಿಗೂ ಮಾತೃ ಇಲಾಖೆಯಂತಿರುವ ಕಂದಾಯ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಬಾಕಿ ಇದ್ದ ಸುಮಾರು 11 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಕಳೆದ ಒಂದು ವರ್ಷದಲ್ಲಿ ಇತ್ಯರ್ಥ ಪಡಿಸಲಾಗುವ ಮೂಲಕ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗಿದೆ ಎಂದರು.
•ಕೃಷಿ ಜಮೀನುಗಳಿಗೆ ಸಂಬಂಧಿಸಿದAತೆ ವ್ಯಾಜ್ಯಗಳನ್ನು ತಪ್ಪಿಸುವ ದೃಷ್ಠಿಯಿಂದ ಕಂದಾಯ ದಾಖಲೆಗಳಲ್ಲಿ ನಿಖರತೆಗಳನ್ನು ತರಲು ಎಲ್ಲಾ ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವ ಕಾರ್ಯ ನಡೆಯುತ್ತಿದೆ. ಒಟ್ಟು 21 ಲಕ್ಷ ಖಾತೆದಾರರ ಪೈಕಿ ಸುಮಾರು 12 ಲಕ್ಷ ಖಾತೆದಾರರ ಆಧಾರ್ ಜೋಡಣೆಮಾಡಲಾಗಿದೆ ಎಂದರು.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಮ್ಮ ಜಿಲ್ಲೆಯು ಉತ್ತಮ ಪ್ರಗತಿಸಾಧಿಸಿದ್ದು, ರೂ.42.35 ಕೋಟಿ ಆರ್ಥಿಕ ವೆಚ್ಚವನ್ನು ಭರಿಸಲಾಗಿದೆ ಹಾಗೂ ಅಮೃತ ಸರೋವರ ಯೋಜನೆಯಡಿ 157 ಕೆರೆಗಳನ್ನು ಮತ್ತು ಸರೋವರಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದರು.
•ಕೃಷಿ ಹೊಂಡಗಳ ಮೂಲಕ ವ್ಯವಸಾಯಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕೃಷಿಭಾಗ್ಯ ಯೋಜನೆಗೆ ಚಾಲನೆ ನೀಡಿದ್ದು, ನಮ್ಮ ಜಿಲ್ಲೆಗೆ ರೂ.6ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿರುತ್ತದೆ. ಅದರಂತೆ 462 ಕೃಷಿಹೊಂಡಗಳ ನಿರ್ಮಾಣದ ಗುರಿಯನ್ನು ಹೊಂದಲಾಗಿರುತ್ತದೆ ಎಂದರು
•ಕಳೆದ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ, ಸಂಕಷ್ಟದಲ್ಲಿದ್ದ ರೈತರಿಗೆ ಸ್ಪಂದಿಸಿದ ಸರ್ಕಾರ, ಕರ್ನಾಟಕದ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಲಾಗಿದ್ದು. ಸಂಕಷ್ಟದಲ್ಲಿದ್ದ ರೈತರಿಗೆ ಬೆಳೆ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಓಆಖ ಈ ಅಡಿಯಲ್ಲಿ ರೂ.18171 ಕೋಟಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರವು ವಿಳಂಬ ಧೋರಣೆ ತೋರಿದ ಕಾರಣ, ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಕಾನೂನು ಹೋರಾಟದ ಮೂಲಕ ರೂ.3454 ಕೋಟಿ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡಲಾಯಿತು. ಅದರಂತೆ, ಮಂಡ್ಯ ಜಿಲ್ಲೆಯ 1ಲಕ್ಷದ 15 ಸಾವಿರ ರೈತರಿಗೆ ರೂ.55 ಕೋಟಿ ಬರಪರಿಹಾರವನ್ನು ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡಿದೆ ಎಂದರು.
•ಪ್ರವಾಹ ಮತ್ತು ಬರಗಾಲದಂತಹ ಹವಾಮಾನ ಸಂಬAಧಿತ ಬೆಳೆನಷ್ಟಗಳಿಗೆ ಆರ್ಥಿಕ ರಕ್ಷಣೆ ಒದಗಿಸುವ ಉದ್ದೇಶದಿಂದ ಬೆಳೆ ವಿಮೆಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಕಳೆದ ವರ್ಷ 2023ನೇ ಸಾಲಿನಲ್ಲಿ ವಿಮಾ ಯೋಜನೆಯಡಿಯಲ್ಲಿ ಈವರೆಗೂ ರಾಜ್ಯದಲ್ಲಿ ರೂ.1911 ಕೋಟಿ ವಿಮಾ ಪರಿಹಾರ ಧನವನ್ನು ರೈತರಿಗೆ ವಿತರಿಸಲಾಗಿದೆ. ಅದರಂತೆ, ಮಂಡ್ಯ ಜಿಲ್ಲೆಯಲ್ಲಿ ಒಟ್ಟು 85,960 ರೈತರು ನೋಂದಣಿ ಮಾಡಿಸಿಕೊಂಡಿದ್ದು, ರೂ.38.92 ಕೋಟಿ ಪರಿಹಾರ ವಿಮಾ ಮೊತ್ತವನ್ನು ಪಾವತಿಸಲಾಗಿದೆ ಎಂದರು.
•ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ನದಿನೀರಿನಿಂದ ಸಮರ್ಪಕ ಕುಡಿಯುವ ನೀರು ಪೂರೈಸಲು‘ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆ’ ಅಡಿಯಲ್ಲಿ ಮೊದಲ ಹಂತದಲ್ಲಿ ರೂ. 943 ಕೋಟಿ ಹಾಗೂ 2ನೇ ಹಂತದಲ್ಲಿ ರೂ.893 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ ಎಂದರು.
•ಲೋಕೋಪಯೋಗಿ ಇಲಾಖೆಯಿಂದ ಜಿಲ್ಲೆಯ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ ಈ ವರ್ಷ ನಮ್ಮ ಸರ್ಕಾರದಿಂದ ಮಂಡ್ಯ ಜಿಲ್ಲೆಗೆ ರೂ.100 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದರು.
•ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟವರ್ಗದವರು ವಾಸಿಸುವ ಕಾಲೋನಿಗಳ ಅಭಿವೃದ್ಧಿಗಾಗಿ ಈ ವರ್ಷ ರೂ.14 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ. ಕಾಮಗಾರಿ ಅನುಷ್ಠಾನಕ್ಕೆ ಕ್ರಮವಹಿಸಲಾಗಿದೆ. ಇದೇ ರೀತಿ ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳ ಅಭಿವೃದ್ಧಿಗೂ ಸಹ ಈ ವರ್ಷ ನಮ್ಮ ಸರ್ಕಾರದಿಂದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು ರೂ.35 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದರು
ಹೆಣ್ಣು ಭ್ರೂಣ ಹತ್ಯೆಯು ಒಂದು ದೊಡ್ಡ ಸಾಮಾಜಿಕ ಪಿಡುಗು. ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ ಇಂದಿಗೂ ಇಂತಹ ಪ್ರಕರಣಗಳು ಕಂಡುಬAದಿರುವುದು ಶೋಚನೀಯ ಸ್ಥಿತಿಯಾಗಿದೆ ಇಂತಹ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಈಗಾಗಲೇ ಕಾನೂನು ಕ್ರಮ ಜರುಗಿಸಲಾಗಿದೆ. ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಕ್ರಮವಹಿಸಬೇಕು ಹಾಗೂ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದರು.
•ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಅಪಘಾತಗಳು ಈ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಸುಧಾರಣಾ ಕ್ರಮಗಳನ್ನು ಜರುಗಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅಪಘಾತಗಳ ಪ್ರಮಾಣ ಕಡಿಮೆಯಾಗಿದೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಲು ಹಾಗೂ ಸರ್ಕಾರಿ ಶಾಲೆಗಳನ್ನು ಉನ್ನತೀಕರಣ ಮತ್ತು ಆಧುನೀಕಣಗೊಳಿಸುವ ನಿಟ್ಟಿನಲ್ಲಿ, ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅSಖ ಅಡಿಯಲ್ಲಿ ಅನುದಾನ ಬಿಡುಗಡೆಯಾಗಿದೆ. ಈ ಮೂಲಕ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ಕೃಷಿ ಮತ್ತು ಜಲಾನಯನ ಇಲಾಖೆಗಳಲ್ಲಿ ಶೇ 99.90 ರಷ್ಟು ಪ್ರಗತಿ ಸಾಧಿಸಿದ್ದು, ಕಳೆದ 11 ವರ್ಷಗಳಲ್ಲಿ ಇದು ಗರಿಷ್ಟ ಸಾಧನೆಯಾಗಿದೆ. ಕೇಂದ್ರ ಪುರಸ್ಕೃತ ಯೋಜನೆಯಡಿ ಶೇ122.93 ರಷ್ಟು ಅನುದಾನ ಬಳಸಿರುವುದು ಸಹ ಸಾಧನೆಯಾಗಿದೆ. ಕಳೆದ 5 ವರ್ಷಗಳಲ್ಲಿ ಈ ವರ್ಷ ರಾಜ್ಯದಲ್ಲಿ ಗರಿಷ್ಠ ಪ್ರಮಾಣದ ಬೆಳೆ ವಿಮೆ ಇತ್ಯರ್ಥ ಪಡಿಸಲಾಗಿದೆ ಎಂದರು
ಕೃಷಿ ಇಲಾಖೆಯಲ್ಲಿ 979 ಖಾಲಿ ಹುದ್ದೆಗಳ ಭರ್ತಿಗೆ ಕೆ.ಪಿಎಸ್.ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರೈತ ಕ್ಷೇತ್ರವನ್ನು ಸುಸ್ಥಿರ ಗೊಳಿಸಲು ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜನಕ್ಕೆ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ.ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಯೋಜನೆಗಳ ಸಂಯೋಜನೆಗಾಗಿ ಇಲಾಖೆಗಳ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿದೆ ಎಂದರು
ಎಲ್ಲಾ ಭಾರತೀಯರು ಒಗ್ಗಟ್ಟಿನ ಬಲ ತೋರಿಸಿ ತ್ಯಾಗ ಬಲಿದಾನ ನೀಡಿದ ದೇಶದ ಹುತಾತ್ಮರನ್ನು ಈ ದಿನ ಪ್ರತಿಯೊಬ್ಬರೂ ಸ್ಮರಿಸಬೇಕು. ಇಂದಿನ ಯುವಪೀಳಿಗೆ ಸ್ವಾತಂತ್ರ‍್ಯ ಹೋರಾಟದ ಈ ಆದರ್ಶಗಳನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕು. ಆ ಮೂಲಕ ನಾಡಿಗೆ, ದೇಶಕ್ಕೆ ಕೀರ್ತಿತರುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ಪಿ ರವಿ ಕುಮಾರ್, ಮೈ ಶುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಮ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದ…
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಕೇಂದ್ರ ಗೃಹ ಸಚಿವಾಲಯ ಬಿಗ್ ಶಾಕ್…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪಘಾತ…
ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’, ಜೂನ್ 06ರಂದು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಮುಹೂರ್ತದ ದಿನವೇ ಘೋಷಿಸಿದೆ.…
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’, ಈ ವರ್ಷದ ನಿರೀಕ್ಷಿತ ಚಿತ್ರಗಳಲ್ಲೊಂದು.…
ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ.10ರಂದೇ ಬಿಡುಗಡೆಯಾಗಬೇಕಿತ್ತು. ಆದರೆ, ತೆಲುಗು ನಿರ್ಮಾಪಕರೊಬ್ಬರು ನಾಗಶೇಖರ್ ಮೇಲೆ ಕೇಸ್…