Mysore
22
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತೆ ಹೆಚ್ಚಿದ ಒಳಹರಿವು: ಅನ್ನದಾತರ ಮೊಗದಲ್ಲಿ ಮಂದಹಾಸ

Inflow to KRS reservoir increases farmers are happy to see

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ.

ಜಲಾಶಯದ ಇಂದಿನ ಒಳಹರಿವು 33,197 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 29,126 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 122.50 ಅಡಿಗಳಾಗಿದೆ. 48.452 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 37.921 ಟಿಎಂಸಿ ನೀರು ಸಂಗ್ರಹವಾಗಿದೆ.

ಕೊಡಗಿನಲ್ಲಿ ಮಳೆ ಮುಂದುವರಿದರೆ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!