ಮಂಡ್ಯ

ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಆಯ್ಕೆಯಲ್ಲಿ ಅನ್ಯಾಯ; ಮಧುಸೂದನ್‌ ಆರೋಪ

ಮಂಡ್ಯ: ಕೇಂದ್ರ ಸರ್ಕಾರದಿಂದ ಅತ್ಯುತ್ತಮ ಗ್ರಾಮ ಪಂಚಾಯಿತಿಗಳಿಗೆ ಕೊಡಮಾಡುವ ೨೦೨೩-೨೪ನೇ ಸಾಲಿನ ಜಿಲ್ಲಾ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಆಯ್ಕೆಯಲ್ಲಿ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿಗೆ ಅನ್ಯಾಯವಾಗಿದೆ ಎಂದು ಗ್ರಾ.ಪಂ ಸದಸ್ಯ, ವಕೀಲ ಮಧುಸೂದನ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದರಿ ಪುರಸ್ಕಾರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ೧೩೪ ಪ್ರಶ್ನಾವಳಿಗಳ ಮೂಲಕ ಗ್ರಾ.ಪಂಗಳಿಗೆ ಅಂಕಗಳನ್ನು ನೀಡಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುವುದು, ಈ ಅಂತಿಮ ಪಟ್ಟಿಯಲ್ಲಿ ಹೆಮ್ಮನಹಳ್ಳಿ, ಭಾರತೀನಗರ, ಮತ್ತು ಕದಲೂರು ಗ್ರಾ.ಪಂಗಳ ಹೆಸರುಗಳಿದ್ದು, ನಮಗಿಂತ ಕಡಿಮೆ ಅಂಕ ಪಡೆದ ಭಾರತೀನಗರ ಗ್ರಾ.ಪಂ ಆಯ್ಕೆ ಮಾಡಿದ್ದಾರೆ ಎಂದು ದೂರಿದರು.

ಈ ಆಯ್ಕೆಯ ವಿರುದ್ಧ ಜಿ.ಪಂ ಸಿಇಓ ಮತ್ತು ಪಂಚಾಯಿತ್‌ರಾಜ್ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಹಾಗೂ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಿದ್ದು, ಜಿ.ಪಂ ಸಿಇಓ ಅವರು ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಓಗಳ ಜೊತೆ ನವೆಂಬರ್ ೩ರಂದು ಜಿ.ಪಂ ನಲ್ಲಿ ಸಭೆ ನಡೆಸಲಾಗಿದ್ದು ಹೆಮ್ಮನಹಳ್ಳಿ, ಭಾರತೀನಗರ ಗ್ರಾ.ಪಂಗಳ ಅಂಕಗಳನ್ನು ಪರಿಶೀಲನೆ ನಡೆಸಲಾಗಿದ್ದು, ಹೆಮ್ಮನಹಳ್ಳಿ ಗ್ರಾ.ಪಂಗೆ ೨೧ ಹೆಚ್ಚು ಅಂಕಗಳು ಲಭಿಸಿರುವುದು ದೃಢಪಟ್ಟಿದೆ ಎಂದರು.

ಭಾರತೀನಗರ ಗ್ರಾ.ಪಂಗೆ ಅಂಕ ದೊರೆಯದ ಹಲವು ಭಾಗಗಳಿಗೆ ೨ ದಿನಗಳಲ್ಲಿ ಕೃತಕ ದಾಖಲಾತಿ ಸೃಷ್ಠಿಸಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿದ್ದು, ಇದು ಮೇಲಧಿಕಾರಿಗಳ ಮಟ್ಟದಲ್ಲಿ ನಡೆದಿರುವ ವಂಚನೆಯು ಅಕ್ರಮವಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಅಧಿಕಾರಿ ಮಟ್ಟದಲ್ಲಿ ಅನ್ಯಾಯವಾಗಿದ್ದು, ಈ ಸಂಬಂಧ ಅಧಿಕಾರಿಗಳು ನ್ಯಾಯ ದೊರಕಿಸಿಕೊಡದೇ ಹೋದಲ್ಲಿ ನ್ಯಾಯಾಲಯದ ಮೆಟ್ಟಿಲು ಏರುವುದಾಗಿ ಇದೇ ಸಂದರ್ಭದಲ್ಲಿ ಎಚ್ಚರಿಸಿದರು.

ಗೋಷ್ಠಿಯಲ್ಲಿ ಹೆಮ್ಮನಹಳ್ಳಿ ಗ್ರಾ.ಪಂ ಅಧ್ಯಕ್ಷೆ ವೀಣಾ, ಸದಸ್ಯ್ಯ ಕಮಲಾಕ್ಷಿ, ಹೆಚ್.ಸಿ.ಉಮೇಶ್, ನಾಗೇಶ್, ಹೆಚ್.ಕೆ.ನಂದೀಶ್‌ಗೌಡ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

7 mins ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

26 mins ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

29 mins ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

1 hour ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

1 hour ago

ಓದುಗರ ಪತ್ರ:  ‘ರಾಮ ಜಪ’ ಮಸೂದೆ ತಿರಸ್ಕರಿಸಿ

ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…

1 hour ago